ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯ (ಓಆರ್‌ಐ) ಮತ್ತು ಶ್ರೀ ವ್ಯಾಸತೀರ್ಥ ಸಂಶೋಧನಾ ಪ್ರತಿಷ್ಠಾನ ಸಂಯುಕ್ತವಾಗಿ ಫೆ. 14 ಮತ್ತು 15 ರಂದು ಮಹಾಕವಿ ‘ಕಾಳಿದಾಸ ಕೃತಿ ಸಮೀಕ್ಷಾ’ಎಂಬ ವಿಷಯ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿದೆ.
ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಫೆ.14 ರ ಬೆಳಗ್ಗೆ 10.30 ಕ್ಕೆ ವಿಚಾರಸಂಕಿರಣವನ್ನು ಸೋಸಲೆ ಶ್ರೀ ವ್ಯಾಸರಾಜರ ಮಠದ ಪೀಠಾಧೀಶ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಂಸದ ಪ್ರತಾಪಸಿಂಹ ಉದ್ಘಾಟಿಸಲಿದ್ದಾರೆ. ಮೈಸೂರು ವಿವಿ ಕುಲಸಚಿವೆ ವಿ.ಆರ್. ಶೈಲಜಾ, ಶ್ರೀ ವ್ಯಾಸತೀರ್ಥ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಸಿ.ಎಚ್. ಶ್ರೀನಿವಾಸಮೂರ್ತಿ, ಓಆರ್‌ಐ ನಿರ್ದೇಶಕ ಡಾ. ಡಿ.ಪಿ. ಮಧುಸೂದನಾಚಾರ್ಯ, ವಿದ್ವಾನ್ ಡಾ. ಟಿ.ವಿ. ಸತ್ಯನಾರಾಯಣ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಇದೇ ಸಂದರ್ಭ ಪದ್ಮಶ್ರೀ ಪುರಸ್ಕೃತ ಹಿರಿಯ ಸಂಶೋಧಕ ಎಸ್. ಸುಬ್ಬರಾಮನ್ ಅವರಿಗೆ ಎರಡೂ ಸಂಸ್ಥೆಗಳ ಪರವಾಗಿ ಗೌರವ ಸನ್ಮಾನ ನಡೆಯಲಿದೆ.
ವಿಚಾರ ಸಂಕಿರಣದಲ್ಲಿ ನಾಡಿನ ಹಿರಿಯ ಸಂಸ್ಕೃತ ಮತ್ತು ವೇದಾಂತ ವಿದ್ವಾಂಸರುಗಳಾದ ಡಾ. ಜಿ. ಕೃಷ್ಣಪ್ರಸಾದ್, ಡಾ. ಶರತ್‌ಚಂದ್ರ ಸ್ವಾಮಿ, ಡಾ. ಟಿ.ವಿ. ಸತ್ಯನಾರಾಯಣ, ಪ್ರೊ. ತಿರುಮಲಾಚಾರ್ಯ ಕುಲಕರ್ಣಿ, ಡಾ. ಉಮಾಕಾಂತ ಭಟ್, ಡಾ. ಎಚ್.ವಿ. ನಾಗರಾಜರಾವ್ ಪ್ರೌಢ ಉಪನ್ಯಾಸ ನೀಡಲಿದ್ದಾರೆ.
ಸಮಾರೋಪ: ಫೆ.15 ರ ಸಂಜೆ 4ಕ್ಕೆ ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಅವರು ವಿಚಾರಸಂಕಿರಣದ ಸಮಾರೋಪ ಭಾಷಣ ಮಾಡಲಿದ್ದಾರೆ. ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಹೇಮಂತ ಕುಮಾರ್, ಪ್ರೊ. ಶ್ರೀನಿವಾಸಮೂರ್ತಿ, ಓಆರ್‌ಐ ಉಪ ನಿರ್ದೇಶಕಿ ಡಾ. ಸಿ. ಪಾರ್ವತಿ ಉಪಸ್ಥಿತರಿರುತ್ತಾರೆ.
ಎರಡೂ ದಿನಗಳ ವಿಚಾರ ಸಂಕಿರಣದಲ್ಲಿ ವೇದಾಂತ, ಸಾಹಿತ್ಯ ಮತ್ತು ಸಂಸ್ಕೃತ ಕ್ಷೇತ್ರದ ತಜ್ಞರಾದ ಡಾ. ಕೆ.ವಿ. ರಾಮಪ್ರಿಯ, ಡಾ. ಸಿ.ಎನ್. ಬಸವರಾಜು, ವಿದ್ವಾನ್ ಪ್ರದೀಪ ಸಿಂಹಾಚಾರ್ಯ, ಡಾ. ಡಿ.ಆರ್. ಮಾಧವಾಚಾರ್ಯ, ವಿದ್ವಾನ್ ಕೆ.ವಿ. ಪ್ರಸನ್ನಾಚಾರ್ಯ, ಡಾ. ಎಂ. ಗೀತಾ, ಪಿ. ಗೌರಿ, ಡಾ. ಶೋಭಾ, ಡಾ. ವಂಶಿ ಕೃಷ್ಣ ಮತ್ತು ಡಾ. ನಾಗಸಂಪಿಗೆ ಕೃಷ್ಣ ಹಾಜರಿದ್ದು, ಸಂವಾದ ಮತ್ತು ಗೋಷ್ಠಿಗಳಿಗೆ ಪ್ರತಿಕ್ರಿಯೆ ನೀಡಲಿದ್ದಾರೆ.
ಕಾಳಿದಾಸನ ಕೃತಿಗಳ ಬಗ್ಗೆ ಆಸಕ್ತಿ ಇರುವವರು ಮುಕ್ತವಾಗಿ ಭಾಗವಹಿಸಬಹುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ