ಮಂಗಳೂರು : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.27 ರ ಸೋಮವಾರ ಬೆಳಗಾಂ ನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ರಾಜ್ಯದ 49,96,924 ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ವತಿಂಗೆ 999.38 ಕೋಟಿ ರೂಗಳ ಆರ್ಥಿಕ ನೆರವಿನ 13ನೇ ಕಂತನ್ನು ಟಿಡಿಬಿ ಮೂಲಕ ಬಿಡುಗಡೆ ಮಾಡಿದರು.
ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ1,39,571 ಫಲಾನುಭವಿಗಳಿಗೆ 27.91 ಕೋಟಿರೂ.ಗಳನ್ನು ಆನ್ ಲೈನ್ ಮೂಲಕ ಬಿಡುಗಡೆ ಮಾಡಲಾಯಿತು.
ಈ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮವನ್ನು ನಗರದ ಪಂಪ್ ವೆಲ್ ಬಳಿ ಇರುವ ಮೀನುಗಾರಿಕಾ ಕಾಲೇಜಿನ ಆಡಿಟೋರಿಯಂ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಜಯಾನಂದ ಅಂಚನ್ ಉಪ ಮೇಯರ್ ಪೂರ್ಣಿಮಾ, ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಕೆವಿಕೆಯ ಮುಖ್ಯಸ್ಥ ರಮೇಶ್ ಸೇರಿದಂತೆ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
ಇದೇ ಕಾರ್ಯಕ್ರಮದ ನೇರ ಪ್ರಸಾರವನ್ನು ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲೂ ಆಯೋಜಿಸಲಾಗಿತ್ತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


