ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 428ನೇ ಜನ್ಮದಿನೋತ್ಸವ

Upayuktha
0

ಬೆಂಗಳೂರು : ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ 'ಕಲಿಯುಗ ಕಾಮಧೇನು' ಶ್ರೀ ರಾಘವೇಂದ್ರ  ಗುರುಸಾರ್ವಭೌಮರ 428ನೇ ಜನ್ಮದಿನೋತ್ಸವದ ಪ್ರಯುಕ್ತ ಫೆಬ್ರವರಿ 26, ಭಾನುವಾರ ಬೆಳಗ್ಗೆ ಗುರುಗಳ ಬೃಂದಾವನಕ್ಕೆ ಕ್ಷೀರಾಭಿಷೇಕ, ಫಲ-ಪಂಚಾಮೃತ ಅಭಿಷೇಕ, ಅಷ್ಟೋತ್ತರ ಪಾರಾಯಣ, ಕನಕಾಭಿಷೇಕ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು. 


ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀನಗರದ ಸಹೋದರಿಯರಾದ ಶ್ರೀಮತಿ ರಂಜಿತಾ ಪ್ರಸಾದ್,  ಶ್ರೀಮತಿ ಭಾವನಾ ಮೂರ್ತಿ ಮತ್ತು ಸಂಗಡಿಗರಿಂದ "ದಾಸರ ಪದಗಳ ಗಾಯನ"  ಕಾರ್ಯಕ್ರಮ ನಡೆಯಿತು. ನಂತರ  ಅಷ್ಟಾವಧಾನ, ರಥೋತ್ಸವ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top