ಉಜಿರೆ: ಸಂಸ್ಕೃತ ಭಾಷೆಯ ಅಂತಃಸತ್ವ ಅಗಾಧವಾದುದು. ಹೊಸ ಶಬ್ದಗಳ ಉತ್ಪತ್ತಿಗೆ ಕೂಡ ತನ್ನನ್ನು ತಾನು ಒಡ್ಡಿಕೊಳ್ಳುತ್ತಿರುವುದು ನೋಡಿದರೆ ಈ ಭಾಷೆಯ ಶಕ್ತಿ ಅರಿವಿಗೆ ಬರುತ್ತದೆ. ಇತ್ತೀಚೆಗೆ ಕಂಪ್ಯೂಟರಿಗೆ ಸೂಕ್ತ ಭಾಷೆ ಸಂಸ್ಕೃತ ಎಂಬುದು ಸಿದ್ದವಾಗುತ್ತಿದೆ. ಸಂಸ್ಕೃತದಲ್ಲಿ ಏನಿಲ್ಲ ಎಂದು ಕೇಳಿದರೆ ಎಲ್ಲವೂ ಇವೆ ಎಂಬುವಷ್ಟು ಅಗಾಧವಾದ ಸಾಹಿತ್ಯವೇ ಇದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಆಡಳಿತ ವಿಭಾಗದ ಕುಲಸಚಿವ ಪ್ರೊ. ಶಶಿಶೇಖರ ಎನ್ ಕಾಕತ್ಕರ್ ಹೇಳಿದರು.
ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯನಿರ್ವಹಣಾ ಕಾರ್ಯಕ್ರಮಗಳ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅಧ್ಯಕ್ಷತೆ ವಹಿಸಿ ಸಂಸ್ಕೃತ ಭಾಷೆಯ ಮಹತ್ತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿನಿಯರಾದ ಅನುಷಾ, ಅಭಿನಯಾ ಹಾಗೂ ಅನುಷಾ ಬಿ.ಕೆ ಇವರಿಗೆ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ಸಂಸ್ಕೃತ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.
ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಶ್ವಿನೀ ಸ್ವಾಗತಿಸಿ, ಮಾನ್ಯಾ ಪರಿಚಯಿಸಿದರು. ಪ್ರಸೀದಾ ರಾವ್ ಪ್ರಾರ್ಥಿಸಿದರು. ಅನ್ನಪೂರ್ಣಾ ನಿರೂಪಿಸಿ ಧರಿತ್ರಿ ಭಿಡೆ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


