ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಇದರ ವತಿಯಿಂದ ತಾಳಮದ್ದಳೆ ನಡೆಯಿತು. ಭಾಸ್ಕರ ಬಾರ್ಯ ಅವರು ನಿರ್ದೇಶಿಸಿರುವ ‘ಯಕ್ಷಭ್ರಾತೃ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.
ಇವರು ಕಳೆದ 17 ವರ್ಷಗಳಿಂದ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ತಂಡವು ಮಹಿಳೆಯರ ಭಾಗವತಿಕೆಯಿಂದಲೇ ಪ್ರಸಿದ್ಧಿ ಪಡೆದಿದೆ.
ಹಿಮ್ಮೇಳದಲ್ಲಿ ಭಾಗವತರಾಗಿ ಮುರಳಿಕೃಷ್ಣ ತೆಂಕಬೈಲು, ಚೆಂಡೆಯಲ್ಲಿ ಮುರಳಿಧರ ಕಲ್ಲೂರಾಯ ಕುಂಜೂರುಪಂಜ ಹಾಗೂ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ ಸಹಕರಿಸಿದರು.
ಮುಮ್ಮೇಳದಲ್ಲಿ ಅರ್ಥಧಾರಿಗಳಾಗಿ ಶುಭಾ ಅಡಿಗ ಶ್ರೀರಾಮನಾಗಿ, ಕಿಶೋರಿ ದುಗ್ಗಪ್ಪ ನಡಂಕಲ್ಲು ಅವರು ಲಕ್ಷ್ಮಣನಾಗಿ, ಶುಭಾ ಗಣೇಶ್ ಶ್ರೀಕೃಷ್ಣನಾಗಿ, ಹರಿಣಾಕ್ಷಿ ಜೆ. ಶೆಟ್ಟಿ ಬಲರಾಮನಾಗಿ ಪಾತ್ರ ನಿರ್ವಹಿಸಿದರು.
ಕಲಾವಿದರನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ಮುರಳಿಕೃಷ್ಣ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು.
ವರದಿ: ಶಿವಕುಮಾರ, ಪ್ರಥಮ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ
ಚಿತ್ರ: ಶಶಿಧರ ನಾಯ್ಕ, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


