ಕೊಟ್ಟೂರು: ಸಿರಿಗೆರೆ ಸಂಸ್ಥಾನದ ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ವಿಜಯನಗರದ ಕೊಟ್ಟೂರಿನಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗವಹಿಸಿ ಸಾಹಿತ್ಯ ಗೋಷ್ಠಿ ಉದ್ಘಾಟಿಸಿ ಸಂದೇಶ ನೀಡಿದರು. ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ನಟ ಮುಖ್ಯಮಂತ್ರಿ ಚಂದ್ರು, ಕವಿ ಎಚ್ ದುಂಡಿರಾಜ್ ಮೊದಲಾದವರು ಉಪಸ್ಥಿತರಿದ್ದರು.
ಚಿಕ್ಕಮುನವಳ್ಳಿಯ ಶ್ರೀ ಆರೂಢ ಮಠದ ಮಹಾರಥೋತ್ಸವ ಧರ್ಮಸಭೆಯಲ್ಲಿ ಪೇಜಾವರ ಶ್ರೀಗಳು ಭಾಗಿ
ಬೆಳಗಾವಿ ಜಿಲ್ಲೆ ಚಿಕ್ಕಮುನವಳ್ಳಿಯ ಶ್ರೀ ಆರೂಢ ಮಠದಲ್ಲಿ ಸದ್ಗುರು ಶ್ರೀ ಶಿವಪುತ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನೂತನ ರಥ ಲೋಕಾರ್ಪಣಾಂಗ ಮಹಾರಥೋತ್ಸವದ ಗುರುವಾರದ ಕಾರ್ಯಕ್ರಮದಲ್ಲಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗವಹಿಸಿ ಬೃಹತ್ ಧರ್ಮಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಶುಭ ಸಂದೇಶ ನೀಡಿದರು. ಗದಗ ಶ್ರೀ ಶಿವಾನಂದ ಮಠದ ಅಭಿನವ ಸದಾಶಿವಾನಂದ ಸ್ವಾಮೀಜಿ, ಅಥಣಿ ಮೋಟಗಿರಿ ಶ್ರೀ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ, ಎಕ್ಕುಂಡಿ ಕುಮಾರೇಶ್ವರ ವಿರಕ್ತ ಮಠದ ಶ್ರೀ ಪಂಚಾಕ್ಷರ ಸ್ವಾಮೀಜಿ, ಕಾದರವಳ್ಳಿ ಶ್ರೀ ಸೀಮಿಮಠದ ಶ್ರೀ ಡಾ ಪಾಲಾಕ್ಷ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧಿಪತಿಗಳು, ಶಾಸಕ ಮಹಾಂತೇಶ ದೊಡ್ಡಗೌಡ್ರು ಸೇರಿದಂತೆ ಗಣ್ಯ ಮಹನೀಯರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ