ಬೆಂಗಳೂರು: ತ್ಯಾಗರಾಜನಗರದ 'ವಜ್ರಕ್ಷೇತ್ರ' ಶ್ರೀ ಅಭಯ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಫೆ. 12 ರ ಭಾನುವಾರದಂದು ಸ್ವಾತಿ ನಕ್ಷತ್ರ ದಿನದ ಪ್ರಯುಕ್ತ ಬೆಳಗ್ಗೆ ಸ್ವಾಮಿಗೆ 108 ಲೀಟರ್ ಕ್ಷೀರಾಭಿಷೇಕ, ವಿಶೇಷ ಅಲಂಕಾರ, ಚಾಮರಾಜಪೇಟೆಯ ಶ್ರೀ ರಾಮ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿತರಣೆಯಾಯಿತು.
ಸಂಜೆಯ ಗಾಯನ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹರಿದಾಸರುಗಳು ಶ್ರೀ ನರಸಿಂಹಸ್ವಾಮಿಯ ಮೇಲೆ ರಚಿಸಿದ ಹಲವು ಕೃತಿಗಳನ್ನು ಕು. ಸುಶ್ರಾವ್ಯ ಆಚಾರ್ಯ ಬಹಳ ಸುಶ್ರಾವ್ಯವಾಗಿ ಹಾಡಿದರು. ನಂತರ ಅಷ್ಟಾವಧಾನ, ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿತರಣೆಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸ್ವಾಮಿ ಕೃಪೆಗೆ ಪಾತ್ರರಾದರು ಎಂದು ದೇವಸ್ಥಾನದ ಗೌರವ ಕಾರ್ಯದರ್ಶಿಗಳಾದ ಶ್ರೀ ನರಹರಿ ಆಚಾರ್ ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ