ಉಡುಪಿ : ಜಿಲ್ಲಾ ಪಂಚಾಯತ್ ಉಡುಪಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ ಉಡುಪಿ ಇವರ ವತಿಯಿಂದ, ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‍ನ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ತಾಲೂಕು ಮಟ್ಟದ ಸಂಪನ್ಮೂಲ ವ್ಯಕ್ತಿಗಳಿಗೆ 5 ದಿನಗಳ ತರಬೇತಿ ಶಿಬಿರವು ಇಂದು ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತ್‍ಯೋಜನಾ ನಿರ್ದೇಶಕ ನವೀನ್‍ಕುಮಾರ್ ಹೆಚ್.ಡಿ.ಮಾತನಾಡಿ, ಸಾಮಥ್ರ್ಯಾಭಿವೃದ್ಧಿ ತರಬೇತಿಯಿಂದ ಸಂಜೀವಿನಿ ಯೋಜನೆಯ ಧ್ಯೇಯೋದ್ದೇಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯ. ಗ್ರಾಮೀಣ ಪ್ರದೇಶದ ಸಂಜೀವಿನಿ ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಮಹಿಳಾ ಸಬಲೀಕರಣದ ಕುರಿತು ತರಬೇತಿ ನೀಡಲು ಓರ್ವ ಸ್ವ ಸಹಾಯ ಗುಂಪಿನ ಮಹಿಳೆಯಿಂದ ಮಾತ್ರ ಸಾಧ್ಯ. ಆದ್ದರಿಂದ ಸ್ವ ಸಹಾಯ ಗುಂಪುಗಳಿಂದಲೇ ತಾಲೂಕು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಜೀವಿನಿ ರಾಜ್ಯ ಸಂಪನ್ಮೂಲ ವ್ಯಕ್ತಿ ನಾಗರಾಜ್ ಗುಪ್ತ, ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್ ಉಪಸ್ಥಿತರಿದ್ದರು.
ಸಮಂತ್ ಸ್ವಾಗತಿಸಿ, ಜಿಲ್ಲಾ ವ್ಯವಸ್ಥಾಪಕಿ ನವ್ಯಾ ನಿರೂಪಿಸಿ, ಜಯಮಾಲಾ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


