ಉಜಿರೆ: ಹಿರಿಯ ಸಮಾಜ ಸೇವಕ, ಕೊಡುಗೈದಾನಿ ಹಾಗೂ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀ ವಿಜಯರಾಘವ ಪಡ್ವೆಟ್ನಾಯರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.
ಮಾಧ್ಯಮಕ್ಕೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು, ವಿಜಯರಾಘವ ಪಡ್ವೆಟ್ನಾಯರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನು ಕುಟುಂಬ ವರ್ಗದವರಿಗೆ ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಅವರು ನಮ್ಮ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪ್ರೋತ್ಸಾಹಿಸುತ್ತಿದ್ದರು. ಉಜಿರೆಯಲ್ಲಿ ನಮ್ಮ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸ್ಥಾಪಕ ಸದಸ್ಯರಾಗಿ ಅವರು ಸಕ್ರಿಯ ಸಹಕಾರ ನೀಡಿರುವುದನ್ನು ನಾವು ಕೃತಜ್ಞತೆಯಿಂದ ಸ್ಮರಿಸುತ್ತೇವೆ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


