ಉಜಿರೆ: ಶ್ರೀ. ಧ.ಮ. ಶಿಕ್ಷಣ ಸಂಸ್ಥೆಯಲ್ಲಿ ವಿಜಯರಾಘವ ಪಡ್ವೆಟ್ನಾಯ ಅವರಿಗೆ ಶ್ರದ್ಧಾಂಜಲಿ

Upayuktha
0

ಉಜಿರೆ: ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ವಿಜಯರಾಘವ ಪಡ್ವೆಟ್ನಾಯ ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ (ಫೆ.19) ಸ್ವಗೃಹದಲ್ಲಿ ನಿಧನರಾದರು. ಅವರು ಶ್ರೀ ಧ.ಮ. ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿದ್ದು, ಶಿಕ್ಷಣ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಮಾರ್ಗದರ್ಶನವನ್ನು ನೀಡುತ್ತಿದ್ದರು.


ಅವರ ಸ್ಮರಣಾರ್ಥ ಶ್ರೀ ಧ.ಮ. ಶಿಕ್ಷಣ ಸಂಸ್ಥೆಯಲ್ಲಿ ಇಂದು ( ಫೆ.20, ಸೋಮವಾರ) ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್‌, ವಿದ್ಯಾರ್ಥಿನಿಲಯ ಆಡಳಿತ ಮತ್ತು ಮಾಹಿತಿ ತಂತ್ರಜ್ಞಾನದ ಕಾರ್ಯನಿರ್ವಹಣಾಧಿಕಾರಿ ಪೂರಣ್‌ ವರ್ಮ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ ಶೆಟ್ಟಿ ಹಾಗೂ ಶ್ರೀ ಧ.ಮ ಸೊಸೈಟಿ ಮತ್ತು ಟ್ರಸ್ಟಿನ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top