ಬೆಂಗಳೂರು: ಹಿರಿಯ ನಟ ಅನಂತನಾಗ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅನಂತನಾಗ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
90ರ ದಶಕದಲ್ಲಿ ಸಕ್ರಿಯ ರಾಜಕಾರಣಿಯಾಗಿ ಶಾಸಕ ಹಾಗೂ ಸಚಿವ ಸ್ಥಾನಗಳನ್ನು ಅಲಂಕರಿಸಿದ್ದ ಅನಂತ್ ನಾಗ್ ಅವರು ಬಳಿಕ ರಾಜಕೀಯದಿಂದ ದೂರ ಸರಿದಿದ್ದರು.
ಅನಂತ ನಾಗ್ ಅವರ ಪಕ್ಷ ಸೇರ್ಪಡೆ ವೇಳೆ ಸಚಿವರಾದ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


