ಪ್ರಾರಂಭದಲ್ಲಿಯೇ ಕ್ಯಾನ್ಸರ್ ಚಿಕಿತ್ಸೆ ಪಡೆದರೆ ಗುಣಮುಖ: ಡಾ. ಶಾನುಭಾಗ್

Upayuktha
0

 


ಮಂಗಳೂರು : ಹಲವು ವಿಧಗಳಲ್ಲಿ ಮನುಷ್ಯನನ್ನು ಬಾಧಿಸುವ ಕ್ಯಾನ್ಸರ್ ಕಾಯಿಲೆಯನ್ನು ಪ್ರಾರಂಭದಲ್ಲಿ ಪತ್ತೆಹಚ್ಚಿ, ಚಿಕಿತ್ಸೆ ಪಡೆದಲ್ಲಿ ಗುಣಮುಖರಾಗಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ವೆನ್‍ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶಾನುಭಾಗ್ ಅವರು ಹೇಳಿದರು.


ಅವರು ಫೆ.4ರ ಶನಿವಾರ ನಗರದ ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಎನ್‍ಸಿಡಿ ಕೋಶ ಮತ್ತು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಕ್ಕೆ ಚಾಲನೆ ನೀಡಿ ಮಾತನಾಡಿದರು.


ಮನೆಯವರು, ಸ್ನೇಹಿತರು, ಆ ಪರಿಸರದಲ್ಲಿರುವವರು ರೋಗಿಗೆ ಆತ್ಮವಿಶ್ವಾಸ ತುಂಬಬೇಕು, ಇದು ಕೂಡ ಕಾನ್ಸರ್ ಗುಣಪಡಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಈ ರೋಗಕ್ಕೆ ಬದಲಾಗುತ್ತಿರುವ ಜೀವನ ಶೈಲಿ ಅತ್ಯಂತ ಪ್ರಮುಖ ಕಾರಣವೆನ್ನಬಹುದು, ಅಸಾಂಕ್ರಮಿಕ ರೋಗವಾಗಿದೆ ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಮಧುಮೇಹ, ಪಾಶ್ರ್ವವಾಯು ಮೊದಲಾದ ಹೃದಯದ ಕಾಯಿಲೆ ಮೊದಲಾದವುಗಳಿಂದ ಜನರು ಸಾವನ್ನಪ್ಪುವ ಪ್ರಮಾಣ ಹೆಚ್ಚಾಗಿದೆ ಎಂದವರು ಹೇಳಿದರು.


ಮಕ್ಕಳಿಗೆ ಎಳವೆಯಿಂದಲೇ ಉತ್ತಮ ಜೀವನದ ಪದ್ಧತಿಗಳನ್ನು ತಿಳಿಸಿಕೊಡಬೇಕು, ಊಟ ಬಲ್ಲವನಿಗೆ ರೋಗವಿಲ್ಲವೆನ್ನುವಂತೆ ಉತ್ತಮ ಆಹಾರ ಶೈಲಿಯನ್ನು ಅವರಿಗೆ ತಿಳಿಸಿಕೊಟ್ಟು, ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು, ರೋಗ ಲಕ್ಷಣಗಳನ್ನು ತಿಳಿದುಕೊಳ್ಳುವುದರಿಂದಲೂ ಕ್ಯಾನ್ಸರ್‍ನಿಂದ ಗೆಲ್ಲಲು ಸಾಧ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ತಿಳಿಸಿದರು.


ವೆನ್ಲಾಕ್‍ನ ಫಾರ್ಮಸಿ ಅಧಿಕಾರಿ ನಿರ್ಮಲಾ ಜಿ.ಪಾಯಸ್ ಮಾತನಾಡಿ, ಮಹಿಳೆಯರು 40 ವರ್ಷದ ಬಳಿಕ ತಿಂಗಳಿಗೊಮ್ಮೆ ಸ್ವ ಪರೀಕ್ಷೆ ಮಾಡಿಕೊಳ್ಳಬೇಕು. ಬದಲಾವಣೆಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು ಎಂದರು.


ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಸುಧಾಕರ್, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ  ಡಾ. ಸಿ.ಎ.ಶಾಂತರಾಮ ಶೆಟ್ಟಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕ್ಯಾನ್ಸರ್ ಜಾಗೃತಿ ಕಿರುನಾಟಕ ಪ್ರದರ್ಶಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top