ಮಂಗಳೂರು : ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಸಂಸ್ಥಾಪಕರ ದಿನಾಚರಣೆಯ ಮಂಗಳವಾರ ಫೆಬ್ರವರಿ 14ರಂದು ಶ್ರೀನಿವಾಸ ಕಾಲೇಜಿನ ವಳಚ್ಚಿಲ್ ಕ್ಯಾಂಪಸ್ ನ ಸಭಾಂಗಣದಲ್ಲಿ ಬೆಳಗ್ಗೆ 9:45ಕ್ಕೆ ನಡೆಯಲಿದೆ.
ಶ್ರೀಮತಿ ವಾಣಿ ವಿ. ಆಳ್ವ ಜೋನಲ್ ಕಮಿಷನರ್ ಸಿಟಿ ಕಾರ್ಪೊರೇಷನ್ ಸುರತ್ಕಲ್ ಮಂಗಳೂರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಾಧಿಪತಿ ಹಾಗೂ ಎ. ಶಾಮರಾವ್ ಫೌಂಡೇಶನ್ ನ ಅಧ್ಯಕ್ಷರಾದ ಸನ್ಮಾನ್ಯ ಗುಲಾಧಿಪತಿಗಳಾದ ಡಾ. ಸಿಎ ಎ. ರಾಘವೇಂದ್ರ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀನಿವಾಸ ವಿಶ್ವವಿದ್ಯಾಲಯದ ಸನ್ಮಾನ್ಯ ಸಹ ಕುಲಾಧಿಪತಿಗಳಾದ ಡಾ. ಎ ಶ್ರೀನಿವಾಸ್ ರಾವ್, ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ಥ ಮಂಡಳಿಯ ಸದಸ್ಯರಾದ ಶ್ರೀಮತಿ ಎ. ವಿಜಯಲಕ್ಷ್ಮಿ ಆರ್ ರಾವ್, ಪ್ರೊ. ಶ್ರೀಮತಿ ಎ. ಮಿತ್ರಾ ಎಸ್ ರಾವ್, ಶ್ರೀಮತಿ ಪದ್ಮಿನಿ ಕುಮಾರ್, ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಪಿ.ಎಸ್. ಐತಾಳ್, ವಿಶ್ವವಿದ್ಯಾಲಯದ ಕುಲ ಸಚಿವರಾದ ಡಾ. ಅನಿಲ್ ಕುಮಾರ್, ಪರೀಕ್ಷಾಂಗ ವಿಭಾಗದ ಕುಲ ಸಚಿವರಾದ ಡಾ. ಶ್ರೀನಿವಾಸ್ ಮಯ್ಯ, ಅಭಿವೃದ್ಧಿ ವಿಭಾಗದ ಕುಲ ಸಚಿವರಾದ ಡಾ. ಅಜಯ್ ಕುಮಾರ್, ಶೈಕ್ಷಣಿಕ ವಿಭಾಗದ ಕುಲಸಚಿವರಾದ ಶ್ರೀ ಆದಿತ್ಯ ಕುಮಾರ್ ಮಯ್ಯ ಉಪಸ್ಥಿತರಿರುವರು.
ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಂಸ್ಥಾಪಕರಾದ ಅಡ್ಕ ಶಾಮರಾವ್ ರವರ ಸುಪುತ್ರರು ಹೆಸರಾಂತ ಲೆಕ್ಕಪರಿ ಶೋಧಕರಾದ ಡಾ. ಸಿಎ ಎ. ರಾಘವೇಂದ್ರ ರಾವ್ ಅವರು 1988ರಲ್ಲಿ ಏಳು ವಿದ್ಯಾರ್ಥಿಗಳಿಂದ ಪ್ರಾರಂಭಿಸಿದ ಶ್ರೀನಿವಾಸ ಸಮೂಹ ಶೈಕ್ಷಣಿಕ ಸಂಸ್ಥೆಗಳು ಇಂದು ಹೆಮ್ಮರವಾಗಿ ಬೆಳೆದಿದೆ. ಸುಮಾರು 12 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಶೈಕ್ಷಣಿಕ ಅಭ್ಯಾಸವನ್ನು ಮಾಡುತ್ತಿದ್ದಾರೆ. ನಾಲ್ಕು ಸಾವಿರ ಸಿಬ್ಬಂದಿಗಳು ವಿಶ್ವವಿದ್ಯಾಲಯ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹೋಟೆಲ್ ಮ್ಯಾನೇಜ್ಮೆಂಟ್, ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಅರೆ ವೈದ್ಯಕೀಯ, ಫಿಜಿಯೋಥೆರಪಿ, ನರ್ಸಿಂಗ್, ಮ್ಯಾನೇಜ್ಮೆಂಟ್, ಫಾರ್ಮಸಿ, ಬಿಎಡ್, ಅಲೈಡ್ ಹೆಲ್ತ್ ಸೈನ್ಸ್, ಎವಿಯೇಷನ್, ಪೋರ್ಟ್ ಅಂಡ್ ಶಿಪ್ಪಿಂಗ್ ಮ್ಯಾನೇಜ್ಮೆಂಟ್, ಸೋಶಿಯಲ್ ವರ್ಕ್, ಸಂಸ್ಕೃತ ಯೋಗ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇವೇ ಮೊದಲಾದ ಕ್ಷೇತ್ರಗಳಲ್ಲಿ ಶ್ರೀನಿವಾಸ ಸಮೂಹ ಶೈಕ್ಷಣಿಕ ಸಂಸ್ಥೆಗಳು ಉತ್ತಮ ಸಾಧನೆ ಮಾಡಿವೆ.
ಮಂಗಳೂರಿನ ಎ. ಶಾಮರಾವ್ ಪ್ರತಿಷ್ಠಾನವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿಭಾಗ ಹಾಗೂ ಪದೇಪೂರ ವಿಭಾಗಗಳಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರತಿಷ್ಠಿತ ಈ ಶಾಮರಾವ್ ಸ್ಮಾರಕ ಅತುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡುತ್ತಿದ್ದು, 2023ನೇ ಸಾಲಿನ ಈ ಪ್ರಶಸ್ತಿಗೆ ನಂತೂರಿನ ಶ್ರೀ ಭಾರತಿ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ನ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಪ್ರತೀಮ್ ಕುಮಾರ್ ಕೆ.ಎಸ್. ಆಯ್ಕೆಯಾಗಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಯನ್ನು ತರುವಲ್ಲಿ ಯಶಸ್ವಿಯಾದ ಸಾಧಕರಾದ ಸಾಯಿ ರಾಧಾ ಗ್ರೂಪ್ ನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಚೇರ್ಮನ್ ಶ್ರೀ ಮನೋಹರ್ ಎಸ್. ಶೆಟ್ಟಿ 2023ರ ಸಾಲಿನ ಎ.ಶಾಮರಾವ್ ಸ್ಮಾರಕ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಾಮಾಜಿಕ ಸೇವೆಯಲ್ಲಿ ಗಮನಾರ್ಹ ಸೇವೆಯನ್ನು ಸಲ್ಲಿಸಿದ ಉಡುಪಿಯ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಶ್ರೀ ಮುರಳಿ ಕಡೆಕರ್ ಅವರು ಎ. ಶಾಮರಾವ್ ಸ್ಮಾರಕ ಸಾಮಾಜಿಕ ಸೇವಾ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಗ್ರ ಶ್ರೇಯಾಂಕಗಳನ್ನು ಸಾಧಿಸಿದ ಶ್ರೀನಿವಾಸ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಈ ಸಮಾರಂಭದಲ್ಲಿ ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ. ಹಿಂದಿನ ವರ್ಷದಲ್ಲಿ ಪಿಎಚ್ಡಿ ಮುಗಿಸಿದ, ಇತರ ದೇಶಗಳಲ್ಲಿ ಪ್ರಕಟಣೆಗಳನ್ನು ಹೊಂದಿರುವ ಅಥವಾ ಪೇಟೆಂಟ್ ಪಡೆದಿರುವ ಶ್ರೀನಿವಾಸ ವಿಶ್ವವಿದ್ಯಾಲಯ ಪ್ರಾಧ್ಯಾಪಕರನ್ನು ಅಭಿನಂದಿಸಲಾಗುವುದು.
ಈ ಎಲ್ಲಾ ಸಾಧಕರನ್ನು ಸಂಸ್ಥಾಪಕರ ದಿನಾಚರಣೆಯಂದು ಗೌರವಿಸಿ ಪ್ರಶಸ್ತಿ ಪ್ರದಾನಿಸಲಾಗುವುದು ಎಂದು ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಶ್ರೀನಿವಾಸ ವಿಶ್ವವಿದ್ಯಾಲಯದ ಸನ್ಮಾನ್ಯ ಕುಲಾಧಿಪತಿಗಳಾದ ಡಾ. ಸಿಎ. ಎ. ರಾಘವೇಂದ್ರ ರಾವ್ ಅವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ