ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿ ಪರೀಕ್ಷೆ: ಅರ್ಜಿ ಆಹ್ವಾನ

Upayuktha
0

ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯು ಸೇನೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಆಸಕ್ತ ಅರ್ಜಿದಾರರು ವೆಬ್ಸೈಟ್ http://agnipathvayu.cdac.in ಮೂಲಕ ಮಾರ್ಚ್ 31 ರ ಒಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. 


ಅರ್ಜಿ ಸಲ್ಲಿಸಲು 2002 ರ ಡಿಸೆಂಬರ್ 26 ರಿಂದ 2006 ರ ಜೂನ್ 26 ನಡುವೆ ಜನಿಸಿರುವ,  ಪಿ.ಯು.ಸಿಯಲ್ಲಿ ಕಲೆ, ವಾಣಿಜ್ಯ, ವಿಜ್ಞಾನ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ 50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ. 50% ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಅವಿವಾಹಿತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 


ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://careerindianairforce.cdac.in ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top