|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಯೋಧ್ಯೆ ಮಂದಿರ ನಿರ್ಮಾಣ ಕಾರ್ಯಕ್ಕೆ ವೇಗ

ಅಯೋಧ್ಯೆ ಮಂದಿರ ನಿರ್ಮಾಣ ಕಾರ್ಯಕ್ಕೆ ವೇಗ

25000 ಭಕ್ತರ ವಸತಿ ಸಾಮರ್ಥ್ಯದ ಯಾತ್ರಿ ಭವನ ನಿರ್ಮಾಣ: ಪೇಜಾವರ ಶ್ರೀ 


ಅಯೋಧ್ಯೆ: ಅಯೋಧ್ಯಾ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾಗಿರುವ ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಗತಿ ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಅಲ್ಲಿನ ಬೆಳವಣಿಗೆಗಳ‌ ಕುರಿತು ಮಾಹಿತಿ ನೀಡಿದ ಶ್ರೀಗಳು, ಮಂದಿರ ನಿರ್ಮಾಣ ಕಾರ್ಯ ವೇಗದಿಂದ ನಡೆಯುತ್ತಿದ್ದು ಪ್ರಸ್ತುತ ಗರ್ಭಗುಡಿಯ ಉಭಾಪೀಠದ ಮೇಲೆ ಸ್ತಂಭಗಳನ್ನು ಜೋಡಣೆ ಮತ್ತು ಗೋಡೆ ನಿರ್ಮಾಣ ನಡೆಯುತ್ತಿದೆ. ಮುಂದಿನ ಹತ್ತು ದಿನಗಳಲ್ಲಿ ಮೇಲ್ಛಾವಣಿಯ ಶಿಲಾ ಬೀಮ್ ಮತ್ತು ಶಿಲಾ ಹೊದಿಕೆಗಳನ್ನು ಅಳವಡಿಸುವ ಕಾರ್ಯ ಆರಂಭವಾಗಲಿದೆ. ಮಂದಿರದ ಲೋಕಾರ್ಪಣೆಯ ವೇಳೆಗೆ ದೇಶಾದ್ಯಂತದಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ 25000 ಜನರ ವಸತಿ ಸಾಮರ್ಥ್ಯದ ಬೃಹತ್ ಯಾತ್ರಿ ಭವನ ನಿರ್ಮಿಸಲಾಗುತ್ತಿದೆ ಎಂದರು.


ಶಿಲೆಗಳು ಪರಿಶೀಲನೆಯಲ್ಲಿ: ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ಶ್ರೀ ರಾಮ ಲಕ್ಷ್ಮಣ ಸೀತೆಯ ವಿಗ್ರಹಗಳ ನಿರ್ಮಾಣಕ್ಕಾಗಿ ಕರ್ನಾಟಕದ ಹೆಗ್ಗಡ ದೇವನ‌ಕೋಟೆ, ಕಾರ್ಕಳ, ತಮಿಳುನಾಡಿನ ಮಹಾಬಲಿಪುರಂ, ರಾಜಸ್ಥಾನ ಹಾಗೂ ನೇಪಾಳಗಳಿಂದ ಶಿಲೆಗಳನ್ನು ತರಲಾಗಿದ್ದು ಶಿಲ್ಪಿಗಳು ಅವುಗಳ ಪರಿಶೀಲನೆ ನಡೆಸಿ ಉತ್ತಮವಾದವುಗಳನ್ನು ಆಯ್ದುಕೊಂಡು ಪ್ರತಿಮೆಗಳನ್ನಯ ನಿರ್ಮಿಸುವರು ಎಂದು ಶ್ರೀಗಳು ತಿಳಿಸಿದರು.


ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ವಿಹಿಂಪ ಮುಖಂಡ ಗೋಪಾಲ್ ಜೀ, ಶ್ರೀಗಳ ಆಪ್ತ ಕಾರ್ಯದರ್ಶಿ ಕೃಷ್ಣ ಭಟ್, ಅಯೋಧ್ಯೆ ಪೇಜಾವರ ಮಠದ ವ್ಯವಸ್ಥಾಪಕ  ಮಹೇಂದ್ರ ದುಬೆ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post