ಬೆಂಗಳೂರು/ಕಾಸರಗೋಡು: ಕರ್ನಾಟಕ ರಕ್ಷಣಾ ವೇದಿಕೆ (ರಿ.) ಕರವೇ ಗಜಸೇನೆ ಸಂಸ್ಥೆಯ ಕೆಚ್ಚೆದೆಯ ಕನ್ನಡಿಗರ ಸಮಾವೇಶ ರಾಘವೇಂದ್ರ ಇವರ ನೇತೃತ್ವದಲ್ಲಿ ಮಂಗಳವಾರ (ಫೆ.28) ರವೀಂದ್ರ ಕಲಾಕ್ಷೇತ್ರ ಬೆಂಗಳೂರಿನಲ್ಲಿ ನಡೆಯಿತು. ಸಮಾರಂಭಕ್ಕೂ ಮುನ್ನ ಹಲವಾರು ಜಾನಪದ ನೃತ್ಯ ಸಹಿತ ಕನ್ನಡಮ್ಮನ ರಥದೊಂದಿಗೆ ಮೈಸೂರು ಬ್ಯಾಂಕ್ ಸರ್ಕಲ್‌ನಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಮೆರವಣಿಗೆ ನಡೆಸಲಾಯಿತು. ಸಾವಿರಾರು ಕರವೇ ಕಾರ್ಯಕರ್ತರು, ಕನ್ನಡ ಅಭಿಮಾನಿಗಳು ಈ ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು.
ಬಳಿಕ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ನೆನಪಿರಲಿ ಪ್ರೇಮ್ ಹಾಗೂ ಇತರ ಗಣ್ಯರು ಭಾಗವಹಿಸಿದ್ದರು. ರಾಘವೇಂದ್ರ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪರಮಪೂಜ್ಯ ಶ್ರೀ ಶ್ರೀ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ ಸಹಿತ ಹಲವಾರು ಧಾರ್ಮಿಕ ಮುಂದಾಳುಗಳು, ಗಣ್ಯಾತಿಗಣ್ಯರು ಹಾಗೂ ಕರವೇ ಗಜಸೇನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಮಾರು 60ಕ್ಕೂ ಅಧಿಕ ಸಾಧಕರನ್ನು ಗುರುತಿಸಿ ಅವರವರ ಕಾರ್ಯಕ್ಷೇತ್ರಕ್ಕೆ ಅನುಗುಣವಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಕರವೇ ಗಜಸೇನೆಯ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷೆಯಾದ ಡಾ.ವಾಣಿಶ್ರೀ ಕಾಸರಗೋಡು ಇವರು ಸಾಹಿತ್ಯ ಸಾಂಸ್ಕೃತಿಕ ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಕಾಸರಗೋಡಿನಲ್ಲಿ ನಡೆಸುವ ಕನ್ನಡ ಪರ ಕೆಲಸಗಳನ್ನು ಗುರುತಿಸಿ "ಗಜರತ್ನ" ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಡಾ. ವಾಣಿಶ್ರೀ ಅವರು ಮಾತನಾಡುತ್ತಾ, ಈಗಿನ ಕಾಲಘಟ್ಟದಲ್ಲಿ ಕನ್ನಡ ಭಾಷೆಯನ್ನು ಕರ್ನಾಟಕದ ರಾಜಧಾನಿ ಬೆಂಗಳೂರಿನಂತಹ ಬೃಹತ್ ನಗರಗಳಲ್ಲಿ ಕೂಡ ಉಳಿಸಿ ಬೆಳೆಸುವ ಕಾರ್ಯವನ್ನು ರಾಘವೇಂದ್ರ ಅವರ ಜೊತೆ ಕೈ ಜೋಡಿಸಿ ನಡೆಸಿ ಕೊಡಬೇಕಾಗಿದೆ ಎಂದು ಹೇಳಿದರು. ಗಡಿನಾಡಾದ ಕಾಸರಗೋಡಿನಲ್ಲಿ ಕನ್ನಡಿಗರು ಅನುಭವಿಸುವ ತೊಂದರೆಗಳನ್ನು ವಿವರಿಸಿದರು. ಕನ್ನಡದ ಹಾಗೂ ಗಡಿನಾಡಿನ ಕುರಿತಾದ ಕವನವನ್ನು ವಾಚಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ