|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆಡಳಿತ ವ್ಯವಸ್ಥೆ ಸಮಸ್ಯೆಗೆ ಪರಿಹಾರವಾಗಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಆಡಳಿತ ವ್ಯವಸ್ಥೆ ಸಮಸ್ಯೆಗೆ ಪರಿಹಾರವಾಗಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಅತ್ಯಂತ ಪ್ರಮುಖ ಭಾಗವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಸ್ನೇಹಿಯಾಗಿರಬೇಕು ಎಂದು ರಾಜ್ಯದ ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆ ಸಚಿವಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 


ಅವರು ಇಂದು, ಬ್ರಹ್ಮಾವರದಲ್ಲಿ, ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ, 10 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.


ಸಾರ್ವಜನಿಕರ ಬಹುತೇಕ ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟಿದ್ದು.ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯಿಂದಕಾರ್ಯ ನಿರ್ವಹಿಸಿ,ಸಮಸ್ಯೆಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡುವ ಮನೋಭಾವವನ್ನು ಸಿಬ್ಬಂದಿಗಳು ಬೆಳೆಸಿಕೊಳ್ಳುವಂತೆ ತಿಳಿಸಿದರು.


ಉಡುಪಿ ಜಿಲ್ಲೆಯಲ್ಲಿ ಡೀಮ್ಡ್‍ ಅರಣ್ಯ ವಿನಾಯತಿಯ ನಂತರ ಕಂದಾಯ ಇಲಾಖೆಗೆ ನೀಡಿರುವ ಜಾಗವನ್ನು ಅರ್ಹರಿಗೆ 94 ಸಿ ಮತ್ತು 94 ಸಿಸಿಯಡಿಯಲ್ಲಿ ಆದ್ಯತೆಯ ಮೇಲೆ ಹಕ್ಕು ಪತ್ರಗಳನ್ನು ನೀಡುವ ಕಾರ್ಯ ಆಗಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ,  ಬ್ರಹ್ಮಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಕಾಮಗಾರಿಗಳಿಗಾಗಿ 310 ಕೋಟಿರೂ. ಮತ್ತು 195 ಕೊಟಿರೂ. ಗಳ ಯೋಜನೆಯನ್ನು ಕೈಗೊಳ್ಳಲಾಗಿದೆ.80 ಕೋಟಿರೂ.ವೆಚ್ಚದಲ್ಲಿ ಬ್ರಹ್ಮಾವರ ಸೀತಾನದಿ ಚತುಷ್ಪಥ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಕೇಂದ್ರ ಸರ್ಕಾರದ ನೆರವಿನಿಂದ 5 ಎಕ್ರೆ ಪ್ರದೇಶದಲ್ಲಿ 100 ಬೆಡ್ ಸಾಮಥ್ರ್ಯದ ಸುಸಜ್ಜಿತ ಇ.ಎಸ್.ಐ. ಆಸ್ಪತ್ರೆ ನಿರ್ಮಾಣ ಕಾಮಗಾರಿ ಯುಟೆಂಡರ್ ಹಂತದಲ್ಲಿದೆ.ನೂತನ ತಾಲೂಕು ಕೋರ್ಟ್ ಹಾಗೂ ತಾಲೂಕು ಪಂಚಾಯತ್‍ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಗಳು ನಡೆದಿವೆ ಎಂದರು.


ಪ್ರಸ್ತುತ ನೂತನ ತಾಲೂಕು ಆಡಳಿತ ಸೌಧದಲ್ಲಿ ಎಲ್ಲಾ ತಾಲೂಕು ಮಟ್ಟದ ಕಚೇರಿಗಳು ಒಂದೇ ಕಡೆ ಇರುವುದರಿಂದ ನಾಗರೀಕರಿಗೆ ಒಂದೇ ಕಡೆಯಲ್ಲಿ ಹಲವು ಸೌಲಭ್ಯಗಳು ಶೀಘ್ರದಲ್ಲಿ ದೊರೆಯಲಿದ್ದು, ಕಟ್ಟಡದಲ್ಲಿ ಪೀಠೋಪಕರಣ ಮತ್ತಿತರ ಸೌಲಭ್ಯಕ್ಕಾಗಿ ಹೆಚ್ಚುವರಿಯಗಿ 2.75 ಕೋಟಿರೂ.ಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸುವುದಾಗಿ ಕಂದಾಯ ಸಚಿವರು ಭರವಸೆ ನೀಡಿದ್ದಾರೆ ಎಂದರು.


ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ವಾರಂಬಳ್ಳಿ ಗ್ರಾಮ ಪಂಚಾಯತ್‍ ಅಧ್ಯಕ್ಷೆ ನಾಗವೇಣಿ ಪಂಡರೀನಾಥ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ,ಜಿಲ್ಲಾ ಪೊಲೀಸ್‍ ಅಧೀಕ್ಷಕ ಅಕ್ಷಯ್‍ ಎಮ್ ಹಾಕೆ,ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಕರ್ನಾಟಕ ಗೃಹ ಮಂಡಳಿ ಇಂಜಿನಿಯರ್ ಸಹನಾ ಮತ್ತಿತರರು ಉಪಸ್ಥಿತರಿದ್ದರು.


ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಸ್ವಾಗತಿಸಿದರು, ಕಂದಾಯ ನಿರೀಕ್ಷಕ ಲಕ್ಷ್ಮಿ ನಾರಾಯಣ ಭಟ್ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 Comments

Post a Comment

Post a Comment (0)

Previous Post Next Post