ಧಾರವಾಡ: ಕನ್ನಡ ಶ್ರೇಷ್ಠ ಕವಿಗಳಲ್ಲೊಬ್ಬರಾದ ದಿ. ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರ ಜನ್ಮಶತಮಾನೋತ್ಸವ ಪ್ರಯುಕ್ತ ಧಾರವಾಡದ ಸಾಹಿತ್ಯ ಗಂಗಾ ಮತ್ತು ಹಂಸಭಾವಿಯ ವಾರಂಬಳ್ಳಿ ಪ್ರತಿಷ್ಠಾನದ ಸಹಯೋಗದಲ್ಲಿ ನೀಡಲಾಗುತ್ತಿರುವ 'ಸು. ರಂ. ಎಕ್ಕುಂಡಿ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ - 2023' ಕ್ಕೆ ಶ್ರೀ ವಾಸುದೇವ ನಾಡಿಗ್ ಅವರ 'ಬಂದರಿಗೆ ಬಂದ ಹಡಗು' ಮತ್ತು ಡಾ. ರತ್ನಾಕರ ಕುನಗೋಡು ಅವರ 'ಎದೆನೆಲದ ಕಾವು' ಕವನ ಸಂಕಲನಗಳು ಆಯ್ಕೆಯಾಗಿವೆ.
ಡಾ. ಸಂಕೇತ ಪಾಟೀಲ, ಡಾ. ಸುಭಾಷ್ ಪಟ್ಟಾಜೆ ಮತ್ತು ಡಾ. ರವಿಶಂಕರ ಜಿ. ಕೆ. ತೀರ್ಪುಗಾರರಾಗಿ ಭಾಗವಹಿಸಿದ್ದರು. ಏಪ್ರಿಲ್ 16 ರಂದು ಧಾರವಾಡದ ರಂಗಾಯಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕನ್ನಡದ ಪ್ರಸಿದ್ಧ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಪ್ರಶಸ್ತಿ 5000 ರೂಪಾಯಿಗಳ ನಗದು, ಸನ್ಮಾನ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ ಎಂದು ಸಾಹಿತ್ಯ ಗಂಗಾ ಪ್ರತಿಷ್ಠಾನದ ಮುಖ್ಯಸ್ಥರಾದ ವಿಕಾಸ ಹೊಸಮನಿಯವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


