ಪುತ್ತೂರಿನ ವಿವೇಕಾನಂದ ಕಾಲೇಜ್ : ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮ

Upayuktha
0

 

ಪುತ್ತೂರು : ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ ನಿವಾರಕ ವಿಧಾನಗಳನ್ನು ಅನುಸರಿಸಬೇಕು ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಸುಂದರ್ ಹೇಳಿದರು.


ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಹುಲ್ಲು ಕಟ್ಟಿಗೆಗಳಿಂದ, ಎಣ್ಣೆಯಿಂದ, ಅನಿಲದಿಂದ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಸಂದರ್ಭಕ್ಕೆ ತಕ್ಕಂತೆ ಅದರ ನಿವಾರಣೆಗೆ ನೀರು, ಫ್ರೋಮ್ ಮಿಶ್ರಿತ ನೀರು ಹಾಗೂ ಇನ್ನಿತರ ಅಗ್ನಿ ಶಾಮಕಗಳನ್ನು ಬಳಸಬೇಕು ಎಂದರು. ಕೆಲವೊಂದು ಬಾರಿ ಸಾಂಪ್ರದಾಯಿಕ ವಿಧಾನಗಳೂ ಕೂಡ ಬಳಕೆಗೆ ಬರುತ್ತವೆ ಎಂದರು. ಅಗ್ನಿ ಆಕಸ್ಮಿಕಗಳು ಸಂಭವಿಸಿದಾಗ ಧೃತಿಗೆಡತೆ ನಿವಾರಣೆಗೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದರು.


ವಿವಿಧ ಅಗ್ನಿಶಾಮಕ ವಿಧಾನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟರು. ವಿದ್ಯಾರ್ಥಿಗಳೂ ಕೂಡಾ ಇದರ ವಿಧಾನಗಳನ್ನು ತಾವೇ ಮಾಡುವುದರ ಮೂಲಕ ಕಲಿತುಕೊಂಡರು.


ಪುತ್ತೂರು ಅಗ್ನಿಶಾಮಕ ಠಾಣಾಧಿಕಾರಿ ಸುಂದರ್ ಅವರ ನೇತೃತ್ವದಲ್ಲಿ ಶಂಕರ್, ಪ್ರವೀಣ್, ಅಬ್ದುಲ್ ಅಜೀಝ್, ಪಾಂಡುರಂಗ, ಕಾಂತರಾಜು ಹಾಗೂ ಸಜಿತ್ ಪ್ರಾತ್ಯಕ್ಷಿಕೆಗಳನ್ನು ನಡೆಸಿಕೊಟ್ಟರು.


ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಕಾರ್ಯಕ್ರಮ ಸಂಯೋಜಕ ಡಾ.ರೋಬಿನ್ ಶಿಂಧೆ, ವಿಬಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top