ಸಮುದ್ರ-ನದಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ

Upayuktha
0

ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಸುಲ್ತಾನ್ ಬತ್ತೇರಿ ಪ್ರದೇಶದಲ್ಲಿ ಪಾದಚಾರಿ ಸಮುದ್ರ-ನದಿ ಸಂಪರ್ಕ ಸೇತುವೆ ನಿರ್ಮಾಣ ಯೋಜನೆ ಕಾಮಗಾರಿಗೆ ಮಾ.5ರ ಭಾನುವಾರ ಸಂಜೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಜಯಾನಂದ ಅಂಚನ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಶಂಕುಸ್ಥಾಪನೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಉಪ ಮೇಯರ್ ಪೂರ್ಣಿಮಾ, ಪಾಲಿಕೆಯ ಕಾಪೋರೇಟರ್ ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಇತರರು, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಅರುಣ್ ಪ್ರಭಾ, ಲಿಂಗೇಗೌಡ ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top