ಭಾರತೀಯ ಹ್ಯಾಮ್ ರೇಡಿಯೊ ಸಂಸ್ಥೆಯ (ಐಐಎಚ್) ಮುಖ್ಯಸ್ಥ ಸತ್ಯಪಾಲ ಪ್ರಕೃತಿ ವಿಕೋಪದಲ್ಲಿ ಉಪಯುಕ್ತ
ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜುಗಳಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಹ್ಯಾಮ್ ರೇಡಿಯೊ’ ಅಭಿವಿನ್ಯಾಸ ಕಾರ್ಯಕ್ರಮಗಳಲ್ಲಿ ಅವರು ಮಾಹಿತಿ ನೀಡಿದರು.
ಹ್ಯಾಮ್ ರೇಡಿಯೊ ಪ್ರಸ್ತುತ ದಿನಗಳಲ್ಲಿ ಬಹಳಷ್ಟು ಉಪಯುಕ್ತವಾಗಿದ್ದು ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಸಾಮಾನ್ಯ ಜನರೂ ಉಪಯೋಗಿಸುತ್ತಿದ್ದಾರೆ. ಹ್ಯಾಮ್ ರೇಡಿಯೊ ಕಲಿಕೆ ಪ್ರಯೋಜನಕಾರಿಯಾಗಿದೆ ಎಂದರು.
12 ವರ್ಷ ಮೇಲ್ಪಟವರು ಹ್ಯಾಮ್ ರೇಡಿಯೊ ಬಳಸಬಹುದು. ಆದರೆ, ಹ್ಯಾಮ್ ರೇಡಿಯೊ ಬಳಸಲು ಪರವಾನಗಿ ಪಡೆದುಕೊಳ್ಳಬೇಕು. ಇದು ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಹೆಚ್ಚು ಉಪಯೋಗಕ್ಕೆ ಬರುತ್ತದೆ ಎಂದರು.
ಹ್ಯಾಮ್ ರೇಡಿಯೊ ಕ್ರೀಡಾ ಚಟುವಟಿಕೆಗಳನ್ನೂ ಹಮ್ಮಿಕೊಳ್ಳಲಾಗುತ್ತದೆ. ಉತ್ಸವಗಳನ್ನೂ ನಡೆಸಲಾಗುತ್ತದೆ ಎಂದು ಅವರು ವಿವರಿಸಿದರು.
ಪತ್ರಿಕೋದ್ಯಮದ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಸತ್ಯಪಾಲ ಅವರ ಪತ್ನಿ ಲಕ್ಷ್ಮೀ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀನಿವಾಸ್ ಹೊಡೆಯಾಲ ಇದ್ದರು. ವಿದ್ಯಾರ್ಥಿ ಚಿದಾನಂದ ರುದ್ರಾಪುರಮಠ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ