ಮಂಗಳೂರು: ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯ ಇರುತ್ತದೆ. ಈ ಕಾರಣದಿಂದ ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆ ಗೃಹರಕ್ಷಕರು ಸೇರಿ ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ ನ್ಯಾಯಯುತವಾಗಿ, ಕಾನೂನು ಬದ್ಧವಾಗಿ ನಡೆಸಲು ಬದ್ಧರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಗೃಹರಕ್ಷಕರಿಗೆ ಚುನಾವಣೆ ಕರ್ತವ್ಯ ಅತ್ಯಂತ ಮಹತ್ವದ್ದಾಗಿ ರುತ್ತದೆ ಎಂದು ದ.ಕ. ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.
ನಗರದ ಪಾಂಡೇಶ್ವರದ ಲಕ್ಷ್ಮೀನಾರಾಯಣ ಹಾಲ್‍ನಲ್ಲಿ ಮಂಗಳೂರು, ಉಳ್ಳಾಲ, ಸುರತ್ಕಲ್ ಮತ್ತು ಪಣಂಬೂರು ಘಟಕದ 220 ಗೃಹರಕ್ಷಕರಿಗೆ ವಿಶೇಷ ಚುನಾವಣಾ ಶಿಬಿರ ಮಾ.23, 24ರಂದು ಎರಡು ದಿನಗಳ ಕಾಲ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲಾ ಗೃಹರಕ್ಷಕರು ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸಬೇಕಾಗಿದೆ ಎಂದರು.
ಈ ತರಬೇತಿಯನ್ನು ಜಿಲ್ಲಾ ಗೃಹರಕ್ಷಕ ದಳ ಮಂಡ್ಯ ಜಿಲ್ಲೆಯ ಸಹಾಯಕ ಬೋಧಕರಾದ ಶರತ್ ಎಸ್.ಜೆ. ಇವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪಸಮಾದೇಷ್ಟರಾದ ರಮೇಶ್ ಇವರು ಉಪಸ್ಥಿತರಿದ್ದರು. ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್‍ಶೇರಾ, ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಭಾಸ್ಕರ್, ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿ ಶಿವಪ್ಪ ನಾಯ್ಕ ಮತ್ತು ಸುರತ್ಕಲ್ ಘಟಕದ ಪ್ರಭಾರ ಘಟಕಾಧಿಕಾರಿ ರಮೇಶ್ ಪೂಜಾರಿ ಇವರುಗಳು ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ