ಎಂ.ಆರ್.ಎಫ್‍ ಘಟಕದಿಂದ ಉಡುಪಿ ನಗರ ಇನ್ನಷ್ಟು ಸ್ವಚ್ಛ ಮತ್ತು ಸುಂದರ : ಶಾಸಕ ಕೆ.ರಘುಪತಿ ಭಟ್

Upayuktha
0

ಉಡುಪಿ : ಕರ್ವಾಲ್‍ನಲ್ಲಿ ಆರಂಭಿಸಿರುವ ಎಂ.ಆರ್.ಎಫ್‍ ಘಟಕದಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮೂಲಕ ಉಡುಪಿ ನಗರವನ್ನುಇನ್ನಷ್ಟು ಸ್ವಚ್ಛ ಮತ್ತು ಸುಂದರ ನಗರವನ್ನಾಗಿ ಮಾಡಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.


ಅವರು ನಿನ್ನೆ ಕರ್ವಾಲುನಲ್ಲಿ, ಉಡುಪಿ ನಗರಸಭೆಯಿಂದ, 2.65 ಕೋಟಿರೂ. ವೆಚ್ಚದಲ್ಲಿ  ನಿರ್ಮಿಸಲಾದ 10 ಟನ್ ಸಾಮಥ್ರ್ಯದ ನೂತನ ಎಂ.ಆರ್.ಎಫ್. ಘಟಕ ಉದ್ಘಾಟಿಸಿ ಮಾತನಾಡಿದರು.


ಉಡುಪಿ ನಗರದಲ್ಲಿ ಪ್ರಸ್ತುತ ಪ್ರತಿದಿನ 20ಟನ್ ಒಣ ಕಸ ಸಂಗ್ರಹ ನಡೆಯುತ್ತಿದ್ದು, ಬೀಡನಗುಡ್ಡೆ ಮತ್ತು ಕರಾವಳಿ ಬೈಪಾಸ್ ಬಳಿ ಇರುವ ತಲಾ 4 ಟನ್ ಸಾಮಥ್ರ್ಯ ಮಿನಿ ಎಂ.ಆರ್.ಎಫ್ ಘಟಕಗಳ ಮೂಲಕ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿದ್ದು, ಈ ನೂತನಘಟಕದಲ್ಲಿ 12 ಟನ್ ವರೆಗೂ ಕಸ ವಿಲೇವಾರಿ ಮಾಡಲು ಸಾಧ್ಯವಾಗಲಿದೆ. ಮುಂದಿನ ದಿನದಲ್ಲಿ ಇದನ್ನು ಇನ್ನೂ ಹೆಚ್ಚುವರಿ10 ಟನ್ ಸಾಮಥ್ರ್ಯದವರೆಗೆ ವಿಸ್ತರಣೆ ಮಾಡಲಾಗುವುದು ಎಂದರು.


ನಗರದಲ್ಲಿ ಸಂಗ್ರಹವಾಗುತ್ತಿರುವ ಹಸಿ ಕಸದ ವಿಲೇವಾರಿಗಾಗಿ ಕರ್ವಾಲು ನಲ್ಲಿ ಶೀಘ್ರದಲ್ಲಿ ಪ್ರತ್ಯೇಕ ವಿಲೇ ಘಟಕ ಆರಂಭಿಸಲಾಗುವುದು ಎಂದ ಶಾಸಕರು, ನೂತನಎಂ.ಆರ್.ಎಫ್‍ ಘಟಕದಲ್ಲಿ ಒಣ ಕಸವನ್ನು ವೈಜ್ಞಾನಿಕವಾಗಿ ಬೇರ್ಪಡಿಸಿ, ಬೇಲಿಂಗ್ ಮಾಡಿ ಮಾರಾಟ ಮಾಡಬಹುದಾಗಿದ್ದು, ಇದರ ನಿರ್ವಹಣೆಯನ್ನು ಪ್ರಾಯೋಗಿಕವಾಗಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ನೀಡಲಾಗುವುದುಎಂದರು.


ಕರ್ವಾಲು ನಲ್ಲಿ ಈಗಾಗಲೇ ಸಂಗ್ರಹವಾಗಿರುವ ಕಸವನ್ನೂ ಸಹ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದರ ಮೂಲಕ, ಈ ಪ್ರದೇಶವನ್ನು ಪರಿಸರಕ್ಕೆ ಪೂರಕವಾಗುವ ರೀತಿಯಲ್ಲಿ ನಿರ್ವಹಣೆ ಮಾಡಲಾಗುವುದು.ಉಡುಪಿ ನಗರದ ಸ್ವಚ್ಛತೆಯ ದೃಷ್ಟಿಯಿಂದ ಎಂ.ಆರ್.ಎಫ್‍ಘಟಕದ ನಿರ್ಮಾಣವು ಅತ್ಯಂತ ಪ್ರಮುಖವಾಗಿದ್ದು, ನಗರವು ಇನ್ನಷ್ಟು ಸ್ವಚ್ಛ ಮತ್ತು ಸುಂದರವಾಗಿ ರೂಪುಗೊಳ್ಳಲಿದೆ ಎಂದರು.


ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್, ಪೌರಾಯುಕ್ತ ಉದಂಶ ಶೆಟ್ಟಿ, ನಗರಸಭೆಯ ಸಹಾಯಕಕಾರ್ಯಪಾಲಕ ಇಂಜಿನಿಯರ್‍ಯಶ್ವಂತ ಪ್ರಭು, ಪರಿಸರ ಅಧಿಕಾರಿ ಸ್ನೇಹಾ ಹಾಗೂ ನಗರಸಭೆಯ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top