ಬೆಳ್ಳಾರೆ: ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ವಿದಾಯ ಸಮಾರಂಭ ಶುಕ್ರವಾರ (ಮಾ.24) ನಡೆಯಿತು.
ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ನಯನಾ ಕಶ್ಯಪ್, ಎಸೋಸಿಯೇಟ್ ಪ್ರೊಫೆಸರ್, ಕೆ.ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿ ಇವರು ಉಪಸ್ಥಿತರಿದ್ದರು. ಶಾಲಾ ಸಂಚಾಲಕ ಎಂ.ಪಿ. ಉಮೇಶ್ ಮತ್ತು ಪ್ರಾಂಶುಪಾಲೆ ದೇಚಮ್ಮ ಟಿ.ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳಿಗೆ ಈಗ ಇರುವ ಅವಕಾಶಗಳು ಹಲವಾರು ಆದ್ದರಿಂದ ಅವರು ಹಲವು ದಾರಿಗಳಲ್ಲಿ ಮುಂದುವರೆಯುತ್ತಾರೆ. ಹೀಗಿರುವಾಗ ಹೆತ್ತವರು 'ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಮರ್ಥ್ಯವನ್ನರಿತು, ಅವರಿಗೆ ಸ್ವಾತಂತ್ರ್ಯ ನೀಡಿ ಅವರು ತಮ್ಮ ಗುರಿಯನ್ನು ಸಾಧಿಸುವಂತೆ ಮಾರ್ಗದರ್ಶಿಸಬೇಕು' ಎಂದು ನುಡಿದರು.
ಶಾಲಾ ಸಂಚಾಲಕರಾದ ಎಂ.ಪಿ. ಉಮೇಶ್ ಅವರು ಮಾತನಾಡಿ 'ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಮತ್ತು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು ಎಂದು ಹಿತವಚನಗಳನ್ನಾಡಿದರು.
ವಿದ್ಯಾರ್ಥಿ ಪೋಷಕರ ಪರವಾಗಿ ಶ್ರದ್ಧಾ ಎಲ್. ರೈ ಅವರು ವಿದ್ಯಾರ್ಥಿಗಳಿಗೆ ಶುಭ ನುಡಿದರು. ಹತ್ತನೇ ತರಗತಿ ವಿದ್ಯಾರ್ಥಿ ಶ್ರೇಯಾನ್ ತನ್ನ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು.
ಶಾಲಾ ಪ್ರಾಂಶುಪಾಲೆ ದೇಚಮ್ಮ ಟಿ.ಎಮ್ ಸ್ವಾಗತಿಸಿದರು. ವಿದ್ಯಾರ್ಥಿ ದೇವಲ್‌ನ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಶಾಲಾ ವಿದ್ಯಾರ್ಥಿಗಳಾದ, ಸ್ತುತಿ ಆರ್.ಭಟ್, ಸಯ್ಯದ್ ಅಫಮ್ ಮತ್ತು ಧನುಷ್ ರಾಮ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ