ಕರ್ನಾಟಕ ಚುನಾವಣೆ ಘೋಷಣೆ: ಮೇ 10ಕ್ಕೆ ಒಂದೇ ಹಂತದಲ್ಲಿ ಮತದಾನ, 13ಕ್ಕೆ ಫಲಿತಾಂಶ

Upayuktha
0

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆಯ ಚುನಾವಣೆಗೆ ದಿನಾಂಕಗಳು ಘೋಷಣೆಯಾಗಿವೆ. ಕೇಂದ್ರ ಚುನಾವಣಾ ಆಯೋಗವು ಹೊಸದಿಲ್ಲಿಯಲ್ಲಿ ಕರೆದ ಸುದ್ದಿಗೋಷ್ಠಿ ಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಇನ್ನಿಬ್ಬರು ಚುನಾವಣಾ ಆಯುಕ್ತರು ದಿನಾಂಕಗಳನ್ನು ಘೋಷಿಸಿದರು.


ವಿಧಾನಸಭೆಯ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10ರಂದು ಚುನಾವಣೆಗಳು ನಡೆಯಲಿವೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.


ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಏ.23ರಂದು ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏ.24 ಕೊನೆಯ ದಿನವಾಗಿರುತ್ತದೆ. ಮೇ 24ರೊಳಗೆ ಹೊಸ ವಿಧಾನಸಭೆ ರಚನೆ ಪೂರ್ಣಗೊಳ್ಳಬೇಕಾಗಿದೆ. 


ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಸಾಕಷ್ಟು ಮುಂಚಿತವಾಗಿಯೇ ಪೂರ್ಣಗೊಳಿಸಲಾಗಿದ್ದು, ಒಟ್ಟಾರೆ 5.21 ಕೋಟಿ  ಅರ್ಹ ಮತದಾರರಿದ್ದಾರೆ. ಅವರ ಪೈಕಿ 2.62 ಕೋಟಿ ಪುರುಷರು ಹಾಗೂ 2.53 ಕೋಟಿ ಮಹಿಳಾ ಮತದಾರರಿದ್ದಾರೆ.


ಸುಗಮ ಮತದಾನ ಪ್ರಕ್ರಿಯೆಯಾಗಿ ಒಟ್ಟಾರೆ  58,208 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ನಗರ ಮತದಾರರನ್ನು ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮಾಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದಕ್ಕಾಗಿ ತಂತ್ರಜ್ಞಾನದ ಸಂಪೂರ್ಣ ಬಳಕೆಗೆ ಒತ್ತು ನೀಡಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದರು.


ರಾಜ್ಯದಲ್ಲಿ 5,21,73,579 ಜನ ಮತದಾರರಿದ್ದಾರೆ. 2,62,42,561 ಜನ ಪುರುಷ ಮತದಾರರು ಹಾಗೂ 2,59,26,319 ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರು 12,15,763 ಜನ ಇದ್ದಾರೆ. 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. 9,17,241 ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 4,699 ತೃತೀಯ ಲಿಂಗಿ ಮತದಾರರಿದ್ದಾರೆ. 17 ವರ್ಷ ಮೇಲ್ಪಟ್ಟವರು 1,25,406 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಇತ್ತೀಚೆಗೆ ರಾಜ್ಯ ವಿಧಾನಸಭೆ ಚುನಾವಣೆಯ ಸಿದ್ಧತೆ ಪರಿಶೀಲನೆಗಾಗಿ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾಹಿತಿ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top