ಬೋಂದೆಲ್: 2.45 ಕೋಟಿ ರೂ.ವೆಚ್ಚದಲ್ಲಿ ಬೊಂದೆಲ್‌ನಲ್ಲಿ ಇರುವ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕ್ಯಾಂಪಸ್‌ನಲ್ಲಿ ನೂತನ ವಿದ್ಯಾರ್ಥಿನಿಯರ ಹಾಸ್ಟೆಲ್ ಅನ್ನು ಶಾಸಕ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.
ವಿದ್ಯಾರ್ಥಿನಿಯರ ಹಾಸ್ಟೆಲ್ ದುಸ್ಥಿತಿಯಲ್ಲಿದ್ದ ಸಂದರ್ಭ ಇಲ್ಲಿನ ವಿದ್ಯಾರ್ಥಿನಿಯರು ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿ ಹೊಸ ಹಾಸ್ಟೆಲ್ ನಿರ್ಮಿಸಲಾಗಿದೆ ಎಂದು ಶಾಸಕರು ನುಡಿದರು.
ಉತ್ತಮ ಮೂಲಸೌಲಭ್ಯ ದೊರಕಿದಾಗ ಶಿಕ್ಷಣದಲ್ಲಿಯೂ ವಿದ್ಯಾರ್ಥಿನಿಯರು ಗಮನ ಕೇಂದ್ರೀಕರಿಸಿ ಸಾಧನೆಗೈಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪ್ರಾಂಶುಪಾಲೆ ಬಿ.ಕಮಲಾಕ್ಷಿ, ವಾರ್ಡನ್ ವನಮಾಲ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ