ಮಾ.31: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ವರ್ಧಂತ್ಯುತ್ಸವ

Upayuktha
0



ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ವರ್ಧಂತ್ಯುತ್ಸವ ಮಾರ್ಚ್ 31ರಂದು ಶುಕ್ರವಾರ ನಡೆಯಲಿದೆ.

ಬೆಳಗ್ಗೆ 9:30ಕ್ಕೆ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದ್ದು, 9:45ರಿಂದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಅಪರಾಹ್ನ 2 ಗಂಟೆಯಿಂದ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಸೇವಾ ಸಮಿತಿಯ ಅಧ್ಯಕ್ಷ ಎಸ್‌.ಎನ್‌ ರಾವ್‌ ಮುನ್ನಿಪ್ಪಾಡಿ ವಹಿಸಲಿದ್ದಾರೆ. ಅತಿಥಿಗಳಾಗಿ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್‌ ಎನ್‌, ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ, ಎಚ್‌. ಶಿವರಾಮ ಭಟ್‌, ಕಾರಿಂಜ ಹಳೆಮನೆ ಅವರು ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ 3:30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದುವರಿಯುತ್ತವೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.


Post a Comment

0 Comments
Post a Comment (0)
To Top