ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

Upayuktha
0

ನಿಟ್ಟೆ: ‘ಇಂದು ವಿಶ್ವವು ಎಷ್ಟೇ ಮುಂದುವರೆದರೂ ಜೀವಿಗೆ ಅಗತ್ಯವಿರುವ ರಕ್ತದಂತಹ ಪ್ರಮುಖ ಅಂಶವನ್ನು ಕೃತಕವಾಗಿ ಉತ್ಪಾದಿಸಲು ಕಷ್ಟಸಾಧ್ಯ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ರಕ್ತದ ಮಹತ್ವ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನ ಮಾಡುವುದು ಅಗತ್ಯ’ ಎಂದು ನಿಟ್ಟೆ ರೂರಲ್ ಹೆಲ್ತ್ ಸೆಂಟರ್ ನ ಆಡಳಿತ ವೈದ್ಯಾಧಿಕಾರಿ ಹಾಗೂ ನಿಟ್ಟೆ ಗಜ್ರಿಯಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್ಫ್ ವೈದ್ಯಾಧಿಕಾರಿ ಡಾ. ಅಶೋಕ್ ಅಭಿಪ್ರಾಯಪಟ್ಟರು.


ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ರೆಡ್‌ಕ್ರಾಸ್ ಸೊಸೈಟಿ, 6 (ಕೆ.ಎ.ಆರ್) ನೇವಿ ಎನ್.ಸಿ.ಸಿ ಸಬ್‌ಯುನಿಟ್ ನಿಟ್ಟೆ, ಮೆಕ್ಯಾನಿಕಲ್ ವಿಭಾಗದ ಏಐಎಂಎಸ್ ಘಟಕ, ರೋಟರಿಕ್ಲಬ್ ನಿಟ್ಟೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ನಿಟ್ಟೆ ಗಜ್ರಿಯಾ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಮಾ.17 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ‘ನಿಟ್ಟೆ ತಾಂತ್ರಿಕ ಕಾಲೇಜಿನ ಈ ಯೋಜನೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿರುವುದು ಶ್ಲಾಘನೀಯ’ ಎಂದು ಅವರು ಹೇಳಿದರು.


ಕಾರ್ಯಕ್ರಮಕ್ಕೆ ಗೌರವ ಅತಿಥಿ ಆಗಿ ಆಗಮಿಸಿದ್ದ ಲಯನ್ಸ್ ಜಿಲ್ಲೆ 317ಸಿ ನ ಫಸ್ಟ್ ವೈಸ್ ಡಿಸ್ಟ್ರಿಕ್ಟ್ ಗವರ್ನರ್ ಡಾ.ನೇರಿ ಕರ್ನೇಲಿಯೋ ಅವರು ರಕ್ತದಾನದ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಶೇಷ್ಟಕಾರ್ಯಕ್ಕೆ ಕೈಜೋಡಿಸಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ‘ರಕ್ತದಾನ ಶಿಬಿರವು ಒಂದು ಉತ್ತಮ ಯೋಜನೆಯಾಗಿದ್ದು ಇದಕ್ಕೆ ವಿದ್ಯಾರ್ಥಿಗಳ ಬೆಂಬಲ ಅಗತ್ಯ. ನಿಟ್ಟೆ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಈ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ನಿಟ್ಟೆ ರೋಟರಿ ಕ್ಲಬ್, ಹಿರಿಯಡ್ಕದ ಲಯನ್ಸ್ ಕ್ಲಬ್, ನಿಟ್ಟೆ ಸಂಸ್ಥೆಯ 2 ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳ ಹಾಗೂ ಕಾಲೇಜಿನ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯವು ಯೋಜನೆಗಳನ್ನು ಹಾಕಿಕೊಂಡಿದೆ’ ಎಂದರು.


ಉಪಪ್ರಾಂಶುಪಾಲರಾದ ಡಾ.ಐ ರಮೇಶ್ ಮಿತ್ತಂತಾಯ, ಡಾ.ಶ್ರೀನಿವಾಸ ರಾವ್ ಬಿ ಆರ್, ನಿಟ್ಟೆ ರೋಟರಿ ಕ್ಲಬ್‌ನ ಅಧ್ಯಕ್ಷ ರೋ.ಡಾ.ಸುದೀಪ್ ಹೆಗ್ಡೆ, ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷ ರವೀಂದ್ರನಾಥ್ ಹೆಗ್ಡೆ, ನಿಟ್ಟೆ ರೆಡ್‌ಕ್ರಾಸ್‌ನ ಮುಖ್ಯಸ್ಥ ಡಾ.ಜನಾರ್ದನ್ ನಾಯಕ್, ಎನ್.ಸಿ.ಸಿ ಆಫೀಸರ್ ಡಾ.ಶಿವಪ್ರಸಾದ್ ಶೆಟ್ಟಿ, ಏಐಎಂಎಸ್ ಸಂಯೋಜಕ ಡಾ.ಸುರೇಶ್ ಶೆಟ್ಟಿ, ಎನ್.ಎಸ್.ಎಸ್ ಅಧಿಕಾರಿ ಶ್ರೀನಿವಾಸ ನೆಕ್ಕಾರ್, ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಡಾ.ಚಂದ್ರಿಕಾ ರಾವ್ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ಡಾ.ವೀಣಾಕುಮಾರಿ ಉಪಸ್ಥಿತರಿದ್ದರು.


ಈ ಒಂದು ದಿನದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕ ಹಾಗೂ ಬೋಧಕೇತರ ವರ್ಗದವರ ರಕ್ತದಾನದೊಂದಿಗೆ 346 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ಪ್ರಾಂಶುಪಾಲರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top