ಪಿಯು ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅನುಮತಿ ಇಲ್ಲ: ಶಿಕ್ಷಣ ಸಚಿವ ಬಿ.ಸಿ ನಾಗೇಶ್

Upayuktha
0

ಬೆಂಗಳೂರು: ಹಿಜಾಬ್‌ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. 9ರಿಂದ ಆರಂಭವಾಗಲಿದೆ.

ಪರೀಕ್ಷೆಯಲ್ಲಿ ಹಿಜಾಬ್‌ಗೆ ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು. ಮುಸ್ಲಿಂ ವಿದ್ಯಾರ್ಥಿನಿಯರ ಈ ಮನವಿಯನ್ನು ಪರಿಗಣಿಸದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಸೂಚಿಸಿದೆ.


ವಿದ್ಯಾರ್ಥಿಗಳು ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಬೇಕು ಎಂಬ 2022 ಫೆ. 5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top