ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವಸಿದ್ದತೆ : ಉಸ್ತುವಾರಿ ಸಚಿವ ಎಸ್.ಅಂಗಾರ ವೀಕ್ಷಣೆ

Upayuktha
0

ಉಡುಪಿ : ಜಿಲ್ಲಾಡಳಿತ ಉಡುಪಿ ಜಿಲ್ಲೆಇವರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವ ತಯಾರಿ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಇಂದು ಕಟಪಾಡಿಯಲ್ಲಿ ವೀಕ್ಷಣೆ ಮಾಡಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ,ಕೇಂದ್ರ ಮತ್ತುರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯವನ್ನು  ಪಡೆದುಕೊಂಡಿರುವ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವು, ನಾಳೆ ಬೆಳಗ್ಗೆ 11 ಗಂಟೆಯಿಂದ ಕಟಪಾಡಿಯ ಮೈದಾನದಲ್ಲಿ  ನಡೆಯಲಿದೆ. ಕಾರ್ಯಕ್ರಮದಲ್ಲಿ  ವಿವಿಧ ಇಲಾಖೆಯ ಸಚಿವರುಗಳು, ಜಿಲ್ಲೆಯ ಶಾಸಕರುಗಳು ಹಾಗೂ ಜನಪ್ರತಿನಿಧಿಗಳು , ಅಧಿಕಾರಿಗಳು ಸೇರಿದಂತೆ ವಿವಿಧ ಯೋಜನೆಯ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದರು.


ಕಾರ್ಯಕ್ರಮಕ್ಕೆ ಕಂದಾಯ ಇಲಾಖೆಯ 1,48,479, ಸಾರ್ವಜನಿಕ ಶಿಕ್ಷಣ ಇಲಾಖೆಯ 3,80,425, ಕಾರ್ಮಿಕ ಇಲಾಖೆ 5,44,361, ಗ್ರಾಮೀಣ ಕುಡಿಯುವ ನೀರುಯೋಜನೆ  2,47,179, ಸಹಕಾರ ಇಲಾಖೆಯ 75,000, ಆಹಾರ ಮತ್ತು ನಾಗರಿಕ ಸರಬರಾಜ ಇಲಾಖೆ 1,96,945, ಕೆ.ಎಂ.ಎಫ್ ನ 96,996, ಕೃಷಿ ಇಲಾಖೆಯ 3,16,320, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 65,157ಮೀನುಗಾರಿಕೆ ಇಲಾಖೆಯ 14,568 ಫಲಾನುಭವಿಗಳು ಸೇರಿದಂತೆ ಮತ್ತಿತರಇಲಾಖೆಯ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದರು.


ಪ್ರತೀ ಇಲಾಖೆಯವರು ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಮ್ಮೇಳನಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನಊಟದ ವ್ಯವಸ್ಥೆಯನ್ನು ಉಚಿತವಾಗಿ ಮಾಡಲಾಗಿದೆ ಎಂದರು.


ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕ ಮಾಹಿತಿ ನೀಡಲು ಇಲಾಖಾವಾರು ಮಾಹಿತಿ ವಸ್ತುಪ್ರದರ್ಶನ ಮಳಗೆಗಳ್ನೂ ಸಹ ತರೆಯಲಾಗಿದ್ದು, ಸಮ್ಮೇಳನದಲ್ಲಿ ವಿವಿಧ  ಸವಲತ್ತುಗಳನ್ನೂ ಸಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು.


ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧಇಲಾಖೆಯ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.


ಈ ಸಂದರ್ಭದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್ ,ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಅಪರ ಜಿಲ್ಲಾಧಿಕರಿ ವೀಣಾ ಬಿ.ಎನ್. ಪ್ರೋಬೇಷನರಿ ಐ.ಎ.ಎಸ್‍ ಅಧಿಕಾರಿ ಯತೀಶ್ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top