ಪುತ್ತೂರು: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ ನಾಳೆ

Upayuktha
0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋ ಖೋ ಪಂದ್ಯಾಟವು ನಾಳೆ ಮಾರ್ಚ್ 20 ಸೋಮವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.


ಅಂದು ಪೂರ್ವಾಹ್ನ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ರಾಷ್ಟ್ರೀಯ ಖೋ ಖೋ ತರಬೇತುದಾರ ಕಾರ್ತಿಕ್.ಎನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಶ್ರೀ.ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.


ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ ತಂಡಗಳು ಇದರಲ್ಲಿ ಭಾಗವಹಿಸುತ್ತವೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
To Top