ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜು ಕೃಷ್ಣ ಸಿ ಅವರು ಶನಿವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪರೀಕ್ಷಾ ಮೌಲ್ಯಮಾಪನ ಕೇಂದ್ರಕ್ಕೆ ಭೇಟಿ ನೀಡಿ ಮೌಲ್ಯಮಾಪಕರೊಂದಿಗೆ ಸಮಾಲೋಚನೆ ನಡೆಸಿದರು.
ರಜಾ ದಿನವಾದರೂ ತಮ್ಮ ಸಿಬ್ಬಂದಿಯೊಂದಿಗೆ ಮೌಲ್ಯಮಾಪನ ಕೇಂದ್ರಕ್ಕೆ ಆಗಮಿಸಿದ ಅವರು ಸುಮಾರು ಆರು ವರ್ಷಗಳ ಬಳಿಕ ಮೊದಲ ಬಾರಿಗೆ ಮೌಲ್ಯಮಾಪಕರಿಗೆ ಸ್ಥಳದಲ್ಲೇ ಚೆಕ್ ವಿತರಿಸಿದರು. ಕುಲಸಚಿವರ ಕಾರ್ಯವೈಖರಿ ಕುರಿತು ಮೌಲ್ಯಮಾಪಕರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಡೆಪ್ಯುಟಿ ರಿಜಿಸ್ಟ್ರಾರ್ ಲಲಿತ, ಸಹಾಯಕ ಲೆಕ್ಕಾಧಿಕಾರಿ ಹೇಮಲತಾ, ಮಾನುಷ ಅಧ್ಯಕ್ಷ ಜಯರಾಂ ಶೆಟ್ಟಿಗಾರ್, ಅಮುಕ್ತದ ಅಧ್ಯಕ್ಷ ಗಣೇಶ್ ಪೈ ಮೊದಲಾದವರು ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ