23 ವಿದ್ಯಾರ್ಥಿಗಳಿಗೆ ದೊರೆತ ಸೌಲಭ್ಯ; ತಲಾ 6,000 ರೂ.ನಂತೆ 1.38 ಲಕ್ಷ ವಿತರಣೆ
ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2019 ಹಾಗೂ 20 ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಇಪ್ಪತ್ತಮೂರು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಆಯ್ಕೆಯಾಗಿ ವಿದ್ಯಾರ್ಥಿ ವೇತನ ಪಡೆದಿದ್ದಾರೆ.
ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ಬಂದಿದ್ದು ಒಟ್ಟು ಒಂದು ಲಕ್ಷದ ಮೂವತ್ತೆಂಟು ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕಾಲೇಜಿನ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರೊ. ದಿನೇಶ ಚೌಟ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ