ದ.ಕ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ರಾಷ್ಟ್ರೀಯ ಸುರಕ್ಷತಾ ದಿನ

Upayuktha
0

ಮಂಗಳೂರು: ನಗರದ  ಮೇರಿಹಿಲ್‍ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ  52ನೇ ರಾಷ್ಟ್ರೀಯ ಸುರಕ್ಷಾ ದಿನಾಚರಣೆ ಅಂಗವಾಗಿ “ಸುರಕ್ಷಾ ಪ್ರತಿಜ್ಞಾ ವಿಧಿ” ಕಾರ್ಯಕ್ರಮ ಶನಿವಾರದಂದು ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಉಪ ಸಮಾದೇಷ್ಟರಾದ ಶ್ರೀ ರಮೇಶ್ ಅವರು ಪ್ರತಿಜ್ಞಾ ವಿಧಿ ಬೋಧಿಸಿ ರಾಷ್ಟ್ರೀಯ ಸುರಕ್ಷತಾ ದಿನದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಕಛೇರಿ ಅಧೀಕ್ಷಕರಾದ ಶ್ರೀಮತಿ ಕವಿತಾ ಕೆ.ಸಿ, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್ ಹಾಗೂ ಗೃಹರಕ್ಷಕರಾದ ದಿವಾಕರ್, ಮಂಜುಪ್ರಸಾದ್, ಚಂಪಾ, ಅಶ್ವಿನಿ, ಜಯಲಕ್ಷ್ಮಿ, ಸುಲೋಚನ ಮುಂತಾದವರು ಉಪಸ್ಥಿತರಿದ್ದರು. 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top