ಉಡುಪಿ: ಗೌರವಾನ್ವಿತ ಪ್ರಧಾನ ಮಂತ್ರಿಗಳ ಮಾರ್ಗದರ್ಶನದಲ್ಲಿ ಮತ್ತು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಸಚಿವ ಪರಷೋತ್ತಮ ರೂಪಾಲಾ ಅವರ ಪ್ರೇರಣೆಯೊಂದಿಗೆ ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಸಾಗರ ಪರಿಕ್ರಮ (ಹಂತ-4) ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮವು ಮಾರ್ಚ್ 19 ರಂದು ಬೆಳಗ್ಗೆ 10 ಗಂಟೆಗೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆಯಲಿದೆ.
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರಷೋತ್ತಮ ರೂಪಾಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಡಾ. ಸಂಜೀವ ಕುಮಾರ್ ಬಲ್ಯಾನ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ತಂತ್ರಜ್ಞಾನ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ಕೆ.ರಘುಪತಿ ಭಟ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಂಗಳೂರು ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿಯಮಿತ ಅಧ್ಯಕ್ಷ ಯಶ್ಪಾಲ್ ಎ ಸುವರ್ಣ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಕೇಂದ್ರ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಜತೀಂದ್ರನಾಥ್ ಸ್ವೈನ್ ಹಾಗೂ ಮತ್ತಿತರರು ಭಾಗವಹಿಸಲಿರುವರು.
ಕೇಂದ್ರ ಮೀನುಗಾರಿಕಾ ಸಚಿವರಿಂದ ಸಂವಾದ ಕಾರ್ಯಕ್ರಮ:
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ಕರಾವಳಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಪೂರ್ವ ನಿರ್ಧರಿಸಿದ ಸಮುದ್ರ ಮಾರ್ಗದ ಮೂಲಕ ಸಾಗರ ಪರಿಕ್ರಮ ಕಾರ್ಯಕ್ರಮವನ್ನು ಆಯೋಜಿಸಿದೆ.
ಮೀನುಗಾರರು, ಕರಾವಳಿ ಸಮುದಾಯಗಳು ಮತ್ತು ಮಧ್ಯಸ್ಥಗಾರರೊಂದಿಗೆ ಸಂವಾದವನ್ನು ಸುಲಭಗೊಳಿಸಲು ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ವಿವಿಧ ಮೀನುಗಾರಿಕೆ ಸಂಬಂಧಿತ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮಾಹಿತಿಯನ್ನು ಪ್ರಸಾರ ಮಾಡಲು, ಎಲ್ಲಾ ಮೀನುಗಾರರಿಗೆ ಮತ್ತು ಸಂಬಂಧಪಟ್ಟವರಿಗೆ ಒಗ್ಗಟ್ಟನ್ನು ಪ್ರದರ್ಶಿಸುವ ಗುರಿ ಹೊಂದಲು, ಆತ್ಮನಿರ್ಭರ ಭಾರತ ಸ್ಪೂರ್ತಿಯಂತೆ ಮಧ್ಯಸ್ಥಗಾರರು ಜವಾಬ್ದಾರಿಯುತ ಮೀನುಗಾರಿಕೆಯನ್ನು ಉತ್ತೇಜಿಸಲು ಮತ್ತು ರಾಷ್ಟ್ರದ ಆಹಾರ ಭದ್ರತೆ ಮತ್ತು ಕರಾವಳಿ ಮೀನುಗಾರ ಸಮುದಾಯಗಳ ಜೀವನೋಪಾಯಕ್ಕಾಗಿ ಸಮುದ್ರ ಮೀನುಗಾರಿಕೆ ಸಂಪನ್ಮೂಲಗಳ ಬಳಕೆ ಹಾಗೂ ಸಮುದ್ರ ಪರಿಸರ ವ್ಯವಸ್ಥೆಗಳ ರಕ್ಷಣೆಯ ನಡುವೆ ಸುಸ್ಥಿರ ಸಮತೋಲನವನ್ನು ಕೇಂದ್ರೀಕರಿಸುವುದಾಗಿದೆ.
ಸಾಗರ ಪರಿಕ್ರಮ ಕಾರ್ಯಕ್ರಮವು ಕಡಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಹಂತ ಹಂತವಾಗಿ ಒಳಗೊಳ್ಳಲು ಉದ್ದೇಶಿಸಿದ್ದು, ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ವಿವಿಧ ಫಲಾನುಭವಿ ಆಧಾರಿತ ಯೋಜನೆ ಮತ್ತು ಕಾರ್ಯಕ್ರಮಗಳ ಅರಿವು ಮತ್ತು ಅಳವಡಿಸಿಕೊಳ್ಳಬಹುದಾದ ಉತ್ತಮ ಅಭ್ಯಾಸಗಳನ್ನು ಪ್ರದರ್ಶಿಸುವ ಮೂಲಕ ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರು, ಮೀನುಗಾರ ಸಮುದಾಯಗಳು ಮತ್ತು ಪಾಲುದಾರರು ಪ್ರಯೋಜನ ಪಡೆಯಬಹುದಾಗಿದೆ.
ಸಾಗರ ಪರಿಕ್ರಮದ ಸಂದರ್ಭದಲ್ಲಿ ಆಯೋಜಿಸಲಾಗುತ್ತಿರುವ ಸಂವಾದ ಕಾರ್ಯಕ್ರಮಗಳು ಮೀನುಗಾರರು ಮತ್ತು ಇತರ ಮಧ್ಯಸ್ಥಗಾರರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮತ್ಸ್ಯಸಂಪದದಂತಹ ವಿವಿಧ ಮೀನುಗಾರಿಕೆ ಯೋಜನೆ ಮತ್ತು ಕಾರ್ಯಕ್ರಮಗಳ ಮೂಲಕ ಅವರ ಆರ್ಥಿಕ ಉನ್ನತಿಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆ ಮೀನುಗಾರಿಕೆ ವಲಯದಲ್ಲಿ ರೂ. 20,050 ಕೋಟಿ ಗಳ ಅತ್ಯಧಿಕ ಅಂದಾಜು ಹೂಡಿಕೆಯೊಂದಿಗೆ ಪ್ರಮುಖ ಯೋಜನೆಯಾಗಿದೆ. ಮೀನುಗಾರಿಕೆ ಮತ್ತು ಜಲಕೃಷಿ ಮೂಲಸೌಕರ್ಯ ಅಭಿವೃದ್ಧಿ ನಿಧಿ, ಅರ್ಹ ಸಂಸ್ಥೆಗಳಿಗೆ ರಿಯಾಯಿತಿ ಹಣಕಾಸು ಒದಗಿಸುವುದು ಮತ್ತು ಮೀನುಗಾರರು ಮತ್ತು ಮೀನುಗಾರರಿಗೆ ವಿಸ್ತರಿಸಲಾದ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಸೌಲಭ್ಯ, ಮೀನುಗಾರಿಕಾ ಕ್ಷೇತ್ರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಜೊತೆಗೆ, ಸಾಗರ ಪರಿಕ್ರಮ ಕಾರ್ಯಕ್ರಮದ ಮೂಲಕ ಕೇಂದ್ರ ಸರ್ಕಾರದ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.
4 ನೇ ಹಂತದ ಭಾಗವಾಗಿ, ಕೇಂದ್ರ ಮೀನುಗಾರಿಕೆ ಸಚಿವರು ಮಾ. 19 ರಂದು ಜಿಲ್ಲೆಗೆ ಆಗಮಿಸಲಿದ್ದು, ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 11.30 ರವರೆಗೆ ಮೀನುಗಾರರೊಂದಿಗೆ ಸಂವಾದ ಮತ್ತು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ