ಮೈಸೂರು : ಪ್ರಖ್ಯಾತ ಪಿಟೀಲು ವಿದ್ವಾಂಸ ಡಾ.ಮೈಸೂರು ಮಂಜುನಾಥ್ ಅವರು ಇಂಗ್ಲೆಂಡ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನೀಡಲು ಆಯ್ಕೆಯಾಗಿದ್ದಾರೆ. ವಿವಿಯ ಸಂಗೀತ ಮತ್ತು ಲಲಿತ ಕಲೆಗಳ ವಿಭಾಗದಲ್ಲಿ ಮಂಜುನಾಥ್ ‘ಕರ್ನಾಟಕ ಶಾಸ್ತ್ರೀಯ ಸಂಗೀತ’ ವಿಷಯ ಕುರಿತು ಮಾ. 9ರಂದು ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನಡೆಸಿಕೊಡಲಿದ್ದಾರೆ.
‘ಸೌಂಡ್ಸ್ ಆಫ್ ಸೌತ್ ಏಷ್ಯಾ’ ಸರಣಿ ಕಾರ್ಯಕ್ರಮದಲ್ಲಿ ಆಕ್ಸ್‌ಫರ್ಡ್ ವಿವಿ ಉಪನ್ಯಾಸಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ವಿದ್ವಾಂಸ ಎಂಬ ಕೀರ್ತಿಗೆ ಮಂಜುನಾಥ್ ಪಾತ್ರರಾಗಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ