ರಾಷ್ಟ್ರೀಯ ಸೇವಾ ಯೋಜನೆ ಬದುಕಿನ ಶಿಕ್ಷಣ ನೀಡುತ್ತದೆ: ಶಾಸಕ ಉಮಾನಾಥ ಕೋಟ್ಯಾನ್

Upayuktha
0

ಸುರತ್ಕಲ್‌: ವಿದ್ಯಾರ್ಥಿಗಳು ಗುರುಹಿರಿಯರ ಮಾರ್ಗದರ್ಶನದಲ್ಲಿ ಆದರ್ಶ ಬದುಕನ್ನು ಸಾಗಿಸಬೇಕು. ರಾಷ್ಟ್ರೀಯ ಸೇವಾ ಯೋಜನೆ ಬದುಕಿನ ಶಿಕ್ಷಣವನ್ನು ನೀಡುವ ಕಾರ್ಯವನ್ನು ನಿರ್ವಹಿಸುತ್ತದೆ ಎಂದು ಮೂಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ನುಡಿದರು.


ಅವರು ಗೋವಿಂದದಾಸ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರವನ್ನು ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ಹಳೆಯಂಗಡಿಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.


ಹಿಂದು ವಿದ್ಯಾದಾಯಿನಿ ಸಂಘದಅಧ್ಯಕ್ಷಜಯಚಂದ್ರ ಹತ್ವಾರ್ ಮಾತನಾಡಿ ವಿದ್ಯಾರ್ಥಿಗಳು ರಾಷ್ಟ್ರೀಯ ಚಿಂತನೆಯ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಮೂಲ್ಕಿ ಸೀಮೆಯ ಅನುವಂಶಿಕ ಅರಸರಾದ ದುಗ್ಗಣ್ಣ ಸಾವಂತರು ಗ್ರಾಮೀಣ ಪರಿಸರದ ಅನುಭವಗಳನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದರು.


ಹಳೆಯಂಗಡಿ ಗ್ರಾಮ ಪಂಚಾಯತ್‍ ಅಧ್ಯಕ್ಷೆ ಪೂರ್ಣಿಮಾ, ಗ್ರಾಮ ಪಂಚಾಯತ್ ಸದಸ್ಯೆ ಚಂದ್ರಿಕಾ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಶ್ರೀ ವಿದ್ಯಾವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿಯ ಅಧ್ಯಕ್ಷ ಯತೀಶ್‍ ಕೋಟ್ಯಾನ್ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.


ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಕೃಷ್ಣಮೂರ್ತಿ ಪಿ ವಹಿಸಿದ್ದರು.

ವಿದ್ಯಾರ್ಥಿನಿ ಸ್ಮಿತಾ ಸ್ವಾಗತಿಸಿದರು. ರಾಷ್ಟೀಯ ಸೇವಾ ಯೋಜನಾಧಿಕಾರಿ ಅಕ್ಷತಾ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿರ್ಮಿಕಾ ವಂದಿಸಿದರು. ಮನೀಶ್‍ ಕಾರ್ಯಕ್ರಮ ನಿರೂಪಿಸಿದರು.


ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ದಯಾ ಸುವರ್ಣ, ಸಹ ಶಿಬಿರಾಧಿಕಾರಿ ಡಾ. ಪ್ರಶಾಂತ್‍ ಎಂ.ಡಿ., ವಿನೋದ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರಯಾಗ್ ಪಿ. ನಾಯಕ್, ಪ್ರಿತೇಶ್ ಪಿ, ಸ್ವಾತಿ ಭಟ್, ಯು.ಡಿ. ಅನುಶ್ರೀ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top