ಇಂದು ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ

Upayuktha
0

ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ (19 ವರ್ಷದೊಳಗಿನ ಯುವತಿಯರಿಗೆ ಕ್ರಿಕೆಟ್ ಪಂದ್ಯಾಟ)ವನ್ನು ಮಾ.8ರ ಬುಧವಾರ ಬೆಳಿಗ್ಗೆ 9 ಗಂಟೆಗೆ ನಗರದ ಕರಾವಳಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

         

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡುವರು.

         

ಶಾಸಕರಾದ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಧ್ವಜಾರೋಹಣ ನೆರವೇರಿಸುವರು.

         

ಮುಖ್ಯ ಅತಿಥಿಗಳಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭಾ ಸಂಸದ ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಯು.ಟಿ. ಖಾದರ್, ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್, ಡಾ. ಭರತ್ ಶೆಟ್ಟಿ ವೈ, ರಾಜೇಶ್ ನಾಯ್ಕ್ ಯು, ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಮಂಜುನಾಥ ಭಂಡಾರಿ ಹಾಗೂ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಪಾಲಿಕೆಯ ಸದಸ್ಯರಾದ ಸಂಧ್ಯಾ ಎಂ. ಆಚಾರ್ ಭಾಗವಹಿಸುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top