ಉಡುಪಿ : ಅಗ್ನಿ ಬನ್ನಿರಾಯ ಜಯಂತಿ ಆಚರಣೆ

Upayuktha
0

 


ಉಡುಪಿ : ಭಾರತೀಯ ಪರಂಪರೆಗೆ ವಿಶೇಷವಾದ ಕೊಡುಗೆಯನ್ನು ನೀಡಿದ ಮಹನೀಯರು ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರದೆ ಮಾನವ ಜನಾಂಗಕ್ಕೆ ಬಹಳಷ್ಟು ಶ್ರಮಿಸಿದ್ದಾರೆ.ಇಂತಹ ಮಹನೀಯರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್ ಹೇಳಿದರು.


ಅವರು ಇಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ, ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್‍. ಕೃಷ್ಣಪ್ಪ, ಉಡುಪಿ ಕನ್ನಡ ಸಾಹಿತ್ಯ ಪರಿಷತ್‍ನ ನರಸಿಂಹ ಮೂರ್ತಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಮ್ಮ ಭೂಮಿಯ ರಾಮಾಂಜಿ ನಿರೂಪಿಸಿ, ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ ಅಧ್ಯಕ್ಷ ರವಿರಾಜ್ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top