ಕೈವಾರ ತಾತಯ್ಯ, ಜಗದ್ಗುರು ರೇಣುಕಾಚಾರ್ಯ ಜಯಂತಿ

Upayuktha
0

ಉಡುಪಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಇವರ ವತಿಯಿಂದ ಜಗದ್ಗುರು ರೇಣುಕಾಚಾರ್ಯ ಮತ್ತು ಕೈವಾರ ತಾತಯ್ಯ ಜಯಂತಿ ಆಚರಣೆಯು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಇಲಾಖೆ ವತಿಯಿಂದ ಆಚರಿಸಲಾಗುವ ಎಲ್ಲಾ ಮಹನೀಯರು, ದಾರ್ಶನಿಕರು, ತತ್ವ ಜ್ಞಾನಿಗಳು, ವಚನಕಾರರ ಬದುಕು ಹಾಗೂ ಮಾರ್ಗದರ್ಶನಗಳು ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಎಂದರು.


ಜಂಗಮ ಮಠದ ಡಾ.ಯು.ಸಿ ನಿರಂಜನ್‍ ಜಯಂತಿ ಕುರಿತು ಉಪನ್ಯಾಸ ನೀಡಿ, ಮಾನವನದಾನವ ಗುಣಗಳನ್ನು ದಹಿಸಿ ಆತನನ್ನು ಮಹಾದೇವನನ್ನಾಗಿಸಲು ಅಪೂರ್ವ ಸಿದ್ಧಾಂತವನ್ನು ನೀಡಿದವರು ಶ್ರೀ ಜಗದ್ಗುರು ರೇಣುಕಾಚಾರ್ಯರು. ಕೈವಾರ ತಾತಯ್ಯಅವರು ಕನ್ನಡ ಮತ್ತು ತೆಲುಗು ಭಾಷಾಗಳಲ್ಲಿ ಪಾರಂಗತರು ಮತ್ತು ಪವಾಡ ಪುರುಷರು. ಇವರೊಬ್ಬ ನಿಜವಾದ ಮಾನವತಾವಾದಿಯಾಗಿದ್ದು, ಇವರನ್ನು ಭಾರತದ ನಾಸ್ಟ್ರಡಾಮಸ್‍ ಎಂದು ಕರೆಯುತ್ತಾರೆ ಎಂದರು.


ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಉಪ ತಹಶೀಲ್ದಾರ್ ವಸಂತಕುಮಾರ್, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾಅಧ್ಯಕ್ಷ ಗಿರೀಶ್‍ಕುಮಾರ್, ವೀರಶೈವ ಸಮುದಾಯ ಮುಖಂಡರಾದ ಸಿದ್ಧಬಸವಯ್ಯ ಸ್ವಾಮಿ, ಕೇಶವ ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ  ನರಸಿಂಹಮೂರ್ತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ರವಿರಾಜ್ ಹೆಚ್.ಪಿ.ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top