ಉಡುಪಿ: ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 21 ರಂದು ಬೆಳಗ್ಗೆ 10.30 ಕ್ಕೆ ಸ್ಮಾರ್ಟ್ಕೇರ್ ಎಂಟರ್ ಪ್ರೈಸಸ್, ಐಕೇರ್ ಲಿಫ್ಟ್ ಪ್ರೈ.ಲಿ, ಶ್ರೀ ಶಾರದಾ ಇಂಟರ್ ನ್ಯಾಷನಲ್ ಸ್ಕೂಲ್ ಮತ್ತು ಪಿ.ಯು.ಸಿ ಕಾಲೇಜ್, ಟೆಕ್ನೋವೈಸ್ ಡಿಜಿಟಲ್ ವರ್ಲ್ಡ್ ಪ್ರೈ.ಲಿ, ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ ಹಾಗೂ ಹೆಚ್.ಡಿ.ಎಫ್.ಸಿ ಲೈಫ್ ಇನ್ಸೂರೆನ್ಸ್ ಕಂಪನಿಗಳ ವತಿಯಿಂದ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ, ಬಿ.ಎ, ಬಿ.ಎಡ್, ಬಿ.ಎಸ್ಸಿ, ಎಂ.ಎ, ಎಂ.ಎಸ್ಸಿ, ಎಂ.ಎಡ್, ಎನ್.ಟಿ.ಟಿ, ಎಂ.ಪಿಎಡ್, ಬಿ.ಎಲ್.ಬಿ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ.
ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು. ಅಭ್ಯರ್ಥಿಯ ತಂದೆ, ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಕೃಷಿ ಜಮೀನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಏಪ್ರಿಲ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://horticulturedir.karnataka.gov.in ತೋಟಗಾರಿಕೆ ಉಪನಿರ್ದೇಶಕರು ಉಡುಪಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ