ನಿಟ್ಟೆ ವಿಶ್ವವಿದ್ಯಾನಿಲಯದ (ಸ್ವಾಯತ್ತ) ಸಂಶೋಧನಾ ಕೇಂದ್ರವಾಗಿ ತೆಂಕನಿಡಿಯೂರು ಕಾಲೇಜು ಆಯ್ಕೆ

Upayuktha
0



ಉಡುಪಿ: 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಮಂಗಳೂರು ವಿ.ವಿಯ ಸ್ನಾತಕೋತ್ತರ ಮತ್ತು ಪದವಿ ವಿಭಾಗದಲ್ಲಿ 9 ರ್‍ಯಾಂಕ್ ಗಳಿಸಿದ ಹಾಗೂ ಕಳೆದ ಐದು ಶೈಕ್ಷಣಿಕ ವರ್ಷಗಳ ರಾಜ್ಯಾದ್ಯಂತ ಇರುವ 431 ಸರಕಾರಿ ಕಾಲೇಜುಗಳಲ್ಲಿಯೇ ಅತ್ಯಂತ ಉತ್ತಮ ಫಲಿತಾಂಶಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆಯಿಂದ ಡಿಸೆಂಬರ್ 25 ರ ಸುಶಾಸನ ದಿನಾಚರಣೆಯಂದು ಗೌರವಿಸಲ್ಪಟ್ಟ ಉಡುಪಿ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ವಿಶ್ವವಿದ್ಯಾನಿಲಯಗಳಲ್ಲಿ ಗುರುತಿಸಿಕೊಂಡ ನಿಟ್ಟೆ ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರವು ಮಂಜೂರಾಗಿರುತ್ತದೆ.


ಸ್ವಾಯತ್ತ ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರವಾಗಿ ಆಯ್ಕೆಯಾದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಏಕೈಕ ಸರಕಾರಿ ಕಾಲೇಜು ಇದಾಗಿರುತ್ತದೆ. ಪಿ.ಹೆಚ್.ಡಿ ಸಂಶೋಧನೆಯನ್ನು ಮಾಡಲು ಮುಂದಿನ 4 ವರ್ಷಗಳ ಅವಧಿಗೆ ನಿಟ್ಟೆ ವಿಶ್ವವಿದ್ಯಾನಿಲಯವು ಅನುಮತಿ ನೀಡಿದೆ. ಕಾಲೇಜಿನಲ್ಲಿ ಇತಿಹಾಸ, ಅರ್ಥಶಾಸ್ತ್ರ, ಇಂಗ್ಲೀಷ್, ಕನ್ನಡ, ಸಮಾಜಶಾಸ್ತ್ರ, ಸಮಾಜಕಾರ್ಯ ಹಾಗೂ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ಕೋರ್ಸುಗಳ ಜತೆಗೆ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ ಹಾಗೂ ಬಿ.ಎಸ್.ಡಬ್ಲ್ಯೂ ಪದವಿ ವಿಭಾಗಗಳಿವೆ. 2006 ರಿಂದ ಈವರೆಗೆ ಸ್ನಾತಕೋತ್ತರ ಹಾಗೂ ಪದವಿ ವಿಭಾಗಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಒಟ್ಟು 46 ರ್‍ಯಾಂಕುಗಳನ್ನು ಪಡೆದು ಉನ್ನತ ಸಾಧನೆ ಮಾಡಿದ ಸಂಸ್ಥೆಯಾಗಿದೆ.


ಕಾಲೇಜಿಗೆ ಸಂಶೋಧನಾ ಕೇಂದ್ರವನ್ನು ಮಂಜೂರು ಮಾಡಿದ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಹಾಗೂ ಕುಲ ಸಚಿವರಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ.ಕೆ ಹಾಗೂ ಬೋಧಕ- ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter





Post a Comment

0 Comments
Post a Comment (0)
To Top