ಉಡುಪಿ: ನಗರದ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮರಣಾರ್ಥ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶುಕ್ರವಾರ ವಿಶ್ವ ಶ್ರವಣ ದಿನ ಆಚರಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಜಗೋಪಾಲ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ರಾಮರಾವ್, ಜಿಲ್ಲಾ ಆಸ್ಪತ್ರೆಯ ಕಿವಿ ಗಂಟಲು ತಜ್ಞ ಡಾ. ಮುರಳೀಧರ ಪಾಟೀಲ್, ಆಡಿಯೋಲಾಜಿಸ್ಟ್ ದಿಶಾ ಕಾರ್ನಾಡ್ ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಹೆಚ್ ಸ್ವಾಗತಿಸಿ, ವಂದಿಸಿದರು, ಆಡಿಯೋ ಮೆಟ್ರಿಕ್ ಅಸಿಸ್ಟೆಂಟ್ ಶಾಮೀಕ್ಷ ರಾವ್ ನಿರೂಪಿಸಿದರು.
ವಿಶ್ವ ಶ್ರವಣ ದಿನದ ಪ್ರಯುಕ್ತ ಶ್ರವಣ ದೋಷದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಕ್ರಮದ ಅಂಗವಾಗಿ ನಗರದ ಬೋರ್ಡ್ ಹೈಸ್ಕೂಲ್ ನಿಂದ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮರಣಾರ್ಥ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯವರೆಗೆ ಜಾಥಾ ನಡೆಯಿತು. ಜಾಥಾದಲ್ಲಿ ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್ ನ ವಿದ್ಯಾರ್ಥಿಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ವಿದ್ಯುತ್ ಕೇಂದ್ರ ಸ್ಥಾಪನೆಗೆ ಮರಗಳ ತೆರವು: ಅಹವಾಲು ಸಭೆ
ಮೂಡಬಿದ್ರೆ ತಾಲೂಕು ಕಡಂದಲೆ ಗ್ರಾಮದ ಸ.ನಂ.308/ಪಿ1 ರಲ್ಲಿ ವಿದ್ಯುತ್ ಕೇಂದ್ರದ ಸ್ಥಾಪನೆಗೆ ಕಾಯ್ದಿರಿಸಿದ ಸ್ಥಳದಲ್ಲಿನ ಒಟ್ಟು 2229 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ ಮಾರ್ಚ್ 4 ರಂದು ಮಧ್ಯಾಹ್ನ 3 ಗಂಟೆಗೆ ಮೂಡಬಿದ್ರೆ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ