ನಗರ ಕೇಂದ್ರ ಗ್ರಂಥಾಲಯದಲ್ಲಿ ಓದುಗರಿಗೆ ಉತ್ತಮ ಸೇವೆ : ಸುಮಿತ್ರಾ ಆರ್ ನಾಯಕ್

Upayuktha
0

ಉಡುಪಿ : ಪ್ರತಿದಿನ ಗ್ರಂಥಾಲಯಕ್ಕೆ ಬರುವ ಸಾರ್ವಜನಿಕ ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಉಡುಪಿ ಜಿಲ್ಲೆಯ ನಾಗರೀಕರು ಮತ್ತು ಪ್ರಜ್ಞಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು, ಉಡುಪಿ ನಗರ ಕೇಂದ್ರ ಗ್ರಂಥಾಲಯವು ಸಾರ್ವಜನಿಕ ಓದುಗರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ ಎಂದು ಉಡುಪಿ ನಗರಸಭೆ ಆಧ್ಯಕಷೆ ಸುಮಿತರಾ ನಾಯಕ್ ಹೇಳಿದರು.


ಅವರು ಇತ್ತೀಚೆಗೆ ಉಡುಪಿ ನಗರ ಕೇಂದ್ರ ಗ್ರಂಥಾಲಯಕ್ಕೆ ಉಪಯೋಗವಾಗುವಂತೆ, ಪುಸ್ತಕಗಳನ್ನು ಇಡುವ ಡಬಲ್‌ರ್ಯಾಕ್‍ಗಳನ್ನು ವ್ಯೆಯಕ್ತಿಕವಾಗಿ ಕೊಡುಗೆ ನೀಡಿ ಮಾತನಾಡಿದರು.


ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಮಕ್ಕಳಿಗಾಗಿ 50 ಹೊಸ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಡಿಜಿಟಲ್ ಗ್ರಂಥಾಲಯ ಪಿತಾಮಹ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರು ಈ ರೀತಿ ಗ್ರಂಥಾಲಯಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಇತರರಿಗೆ ಮಾದರಿ ಎಂದರು. ಇಲ್ಲಿನ ಜನತೆ ಸುಸಂಸ್ಕೃತರು ಮತ್ತು ಪ್ರಜ್ಞಾವಂತರು. ಪುಸ್ತಕಗಳು ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕ. ಪುಸ್ತಕ ಸಂಸ್ಕೃತಿ ಬೆಳೆಸಲು ಇಂತಹ ಅತ್ಯುತ್ತಮ ಪೀಠೋಪಕರಣ, ಪುಸ್ತಕಗಳನ್ನು ಕೊಡುಗೆ ನೀಡುವುದರ ಮೂಲಕ ಗ್ರಂಥಾಲಯದ ಅಭಿವೃದ್ಧಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ” ಎಂದರು.


ಕಾರ್ಯಕ್ರಮದಲ್ಲಿ ಮಂಗಳೂರು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ರಾಘವೇಂದ್ರ , ಜಿಲ್ಲಾ ಕೇಂದ್ರ ಗ್ರಂಥಾಲಯ, ಮಂಗಳೂರಿನ ಮುಖ್ಯ ಗ್ರಂಥಾಲಯಾಧಿಕಾರಿ ಗಾಯತ್ರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಉಡುಪಿಯ ಜಯಶ್ರೀ ಎಂ., ಇವರು ಉಪಸ್ಥಿತರಿದ್ದರು.


ಉಡುಪಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ., ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸುನೀತಾ ಬಿ.ಎಸ್., ಗ್ರಂಥಾಲಯ ಸಹಾಯಕರು, ಪ್ರಾರ್ಥಿಸಿದರು. ಶಕುಂತಳ ಕುಂದರ್, ಪ್ರಥಮ ದರ್ಜೆ ಸಹಾಯಕರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top