ಉಡುಪಿ: ಚುನಾವಣೆ ಸಂದರ್ಭ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡ ರಚನೆ

Upayuktha
0

0


ಉಡುಪಿ: ರಾಜ್ಯ ವಿಧಾನ ಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆ, ಮತದಾರರನ್ನು ಸೆಳೆಯಲು ನಕಲಿ/ ಕಳಪೆ ಮಟ್ಟದ ಮದ್ಯ ಹಾಗೂ ಕಳ್ಳಭಟ್ಟಿ ಸಾರಾಯಿಗಳನ್ನು ತಯಾರಿಸಿ, ಸಾಗಾಣಿಕೆ ಹಾಗೂ ಶೇಖರಣೆ ಮಾಡಿ, ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿತರಿಸುವ ಸಾಧ್ಯತೆ ಇದ್ದು, ಇದನ್ನು ಸೇವನೆ ಮಾಡಿದವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು ಹಾಗೂ ಕೆಲವು ಸಮಾಜಘಾತುಕರು ಅಕ್ರಮವಾಗಿ ಆದಾಯ ಗಳಿಸಲು ತೆರಿಗೆ ಪಾವತಿಸಿರುವ ಮದ್ಯವನ್ನು ಖರೀದಿಸಿ, ದಾಸ್ತಾನುಇಟ್ಟು, ಅದನ್ನುಚುನಾವಣೆಯಡ್ರೈಡೇ ದಿನಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಾಧ್ಯತೆ ಇರುವುದರಿಂದ ಇಂತಹ ಕಾರ್ಯಗಳನ್ನು ತಡೆಗಟ್ಟಿ ಅಂತಹವರ ವಿರುದ್ಧ ಅಬಕಾರಿ ಇಲಾಖೆ ವತಿಯಿಂದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.


ಅಬಕಾರಿ ಅಕ್ರಮಗಳನ್ನು ತಡೆಗಟ್ಟಿ, ಜಾರಿ ಮತ್ತು ತನಿಖೆ ಕಾರ್ಯಗಳನ್ನು ಚುರುಕುಗೊಳಿಸಿ, ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಿ, ನಕಲಿ, ಕಳ್ಳಭಟ್ಟಿ, ಅನಧಿಕೃತ ಮದ್ಯತಯಾರಿ, ಸಾಗಾಣಿಕೆ, ದಾಸ್ತಾನು ಮತ್ತು ಮಾರಾಟ ಕಂಡುಬಂದಲ್ಲಿ ಟೋಲ್ ಫ್ರೀ ನಂ.: 1800 4250 732, ಉಡುಪಿ ದೂ.ಸಂಖ್ಯೆ: 0820-2532732, ಕುಂದಾಪುರ ದೂ.ಸಂಖ್ಯೆ: 08254-200902 ಹಾಗೂ ಕಾರ್ಕಳ ದೂ.ಸಂಖ್ಯೆ: 08258-298865 ತಾಲೂಕು ಕಂಟ್ರೋಲ್‍ ರೂಂ ಅಥವಾ ಅಬಕಾರಿ ಅಧಿಕಾರಿಗಳ ಸಂಚಾರಿ ದೂರವಾಣಿ ಸಂಖ್ಯೆಗಳಾದ ಜಿಲ್ಲಾ ಅಬಕಾರಿ ಉಪ ಆಯುಕ್ತರು ಮೊ.ನಂ: 9449597104, ಉಡುಪಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರು ಮೊ.ನಂ: 9449597113, ಕುಂದಾಪುರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರು ಮೊ.ನಂ: 9449597777, ಉಡುಪಿ ಉಪ ವಿಭಾಗದ ಅಬಕಾರಿ ನಿರೀಕ್ಷಕರು ಮೊ.ನಂ: 9449597114, ಕುಂದಾಪುರ ಉಪ ವಿಭಾಗದ ಅಬಕಾರಿ ನಿರೀಕ್ಷಕರು ಮೊ.ನಂ: 9449597778, ಉಡುಪಿ ವಲಯ-1 ಅಬಕಾರಿ ನಿರೀಕ್ಷಕರು ಮೊ.ನಂ: 9448921980, ಉಡುಪಿ ವಲಯ-2 ಅಬಕಾರಿ ನಿರೀಕ್ಷಕರು ಮೊ.ನಂ:9731860034, ಕಾರ್ಕಳ ವಲಯ ಅಬಕಾರಿ ನಿರೀಕ್ಷಕರು ಮೊ.ನಂ: 9686198924, ಕುಂದಾಪುರ ವಲಯ ಅಬಕಾರಿ ನಿರೀಕ್ಷಕರು ಮೊ.ನಂ: 9731674117 ಹಾಗೂ ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕರು ಮೊ.ನಂ: 9035773785 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top