ಉಡುಪಿ : ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ, ಉಡುಪಿ ಜಿಲ್ಲಾಘಟಕ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನಕೇಂದ್ರ ಅಜ್ಜರಕಾಡು ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ನಿನ್ನೆ ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುಜಿ.ಎವಿ ಹಾಲ್‍ನಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ರಾಜ್ಯ ಶಾಖೆ ಆಡಳಿತ ಮಂಡಳಿ ಸದಸ್ಯ ಲಯನ್ ಪಿಎಮ್‍ಜೆಎಫ್ ವಿ.ಜಿ. ಶೆಟ್ಟಿ, ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಘಟಕವು ಮಾನವೀಯ ನೆಲೆಯಲ್ಲಿ ಮಾಡುತ್ತಿರುವ ಸಮಾಜ ಮುಖಿ ಸೇವೆಗಳ ಬಗ್ಗೆ ವಿವರಿಸಿ, ಕ್ಯಾನ್ಸರ್ ಬಗ್ಗೆ ವಿದ್ಯಾರ್ಥಿನಿಯರಿಗೆ ಜಾಗೃತಿಯನ್ನು ಮೂಡಿಸಿ, ರೋಗಿಗಳನ್ನು ಪತ್ತೆ ಹಚ್ಚಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಿ ಸ್ಥ್ಯೆರ್ಯ ತುಂಬಬೇಕು. ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರಿಂದ ಕ್ಯಾನ್ಸರ್ ಹಾಗೂ ಇತರೆ ಕಾಯಿಲೆಗಳಿಗೆ ತುತ್ತಾಗುವುದನ್ನು ತಪ್ಪಿಸಬಹುದು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್‍ಎಸ್. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಿ.ರತ್ನಾಕರ ಶೆಟ್ಟಿ, ರೆಡ್‍ಕ್ರಾಸ್ ಆಡಳಿತ ಮಂಡಳಿ ಸದಸ್ಯಟಿ. ಚಂದ್ರಶೇಖರ್ ಹಾಗೂ ಯುವರೆಡ್‍ಕ್ರಾಸ್ ಪ್ರೋಗ್ರಾಮ್ ಆಫೀಸರ್ ಪ್ರೊ. ಶೋಭಾ ಆರ್ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ