ಎಸ್‌ಡಿಎಂ ಮಹಿಳಾ ಐಟಿಐ ಉಜಿರೆ: 10ರಂದು ವಾರ್ಷಿಕೋತ್ಸವ

Upayuktha
0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ ಮಾ.10ರಂದು ಶುಕ್ರವಾರ ನಡೆಯಲಿದೆ.


ಎಸ್‌ಡಿಎಂ ಮಹಿಳಾ ಐಟಿಐ ಸಭಾಂಗಣದಲ್ಲಿ ಬೆಳಗ್ಗೆ 10:30ಕ್ಕೆ ಸಮಾರಂಭದ ಉದ್ಘಾಟನೆ ನೆರವೇರಲಿದೆ. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್‌ಚಂದ್ರ ಎಸ್‌ ಅವರು ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರಿನ ಉದ್ಯಮಿ, ಕುತ್ತೆತ್ತೂರಿನ ಸಾವುಕಾರ್ ಟೆಕ್ಸ್‌ಟೈಲ್ಸ್ ಮತ್ತು ಯುನಿಫಾರ್ಮ್ಸ್ ನ ಆಡಳಿತ ಪಾಲುದಾರ ಪ್ರಕಾಶ್ ಭಂಡಾರಿ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ವಿ. ಪ್ರಕಾಶ್ ಕಾಮತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಹಿಳೆಯಲ್ಲಿ ಉದ್ಯಮಶೀಲತೆ ಬೆಳೆಸಲು ಮತ್ತು ಪ್ರೋತ್ಸಾಹ ನೀಡಲು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಉಜಿರೆಯಲ್ಲಿ ಮಹಿಳಾ ಐಟಿಐ ಕಳೆದ 17 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top