ಡಾ.ಶ್ರೀಧರ್ ಹೆಚ್.ಜಿಯವರಿಗೆ “ವಸುದೇವ ಭೂಪಾಲಂ” ಪ್ರಶಸ್ತಿ

Upayuktha
0


ಪುತ್ತೂರು:
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ  2021 ನೇ ಸಾಲಿನ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ ಕುಲಸಚಿವರಾಗಿರುವ ಡಾ.ಶ್ರೀಧರ್ ಹೆಚ್.ಜಿಯವರ “ಚಪಡ” ಕಾದಂಬರಿಗೆ “ವಸುದೇವ ಭೂಪಾಲಂ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿಯ ಕುಲಪತಿ ಡಾ. ನಿರಂಜನ ವಾನಳ್ಳಿ, ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ, ಸಾಹಿತಿ ಪ್ರೊ. ಕಾಳೇಗೌಡ ನಾಗವಾರ, ಬಿ.ಎಂ ಪಟೇಲ್ ಪಾಂಡು ಉಪಸ್ಥಿತರಿದ್ದರು.  

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top