ಭಾರ ಎತ್ತುವ ಸ್ಪರ್ಧೆ: ಆಳ್ವಾಸ್ ಸಾಧನೆ

Upayuktha
0

 ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಮಗ್ರ ರನ್ನರ್ ಅಪ್ ಪ್ರಶಸ್ತಿ

ವಿದ್ಯಾಗಿರಿ (ಮೂಡುಬಿದಿರೆ) : ಚಂಡಿಗಡದಲ್ಲಿ ಈಚೆಗೆ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಭಾರ ಎತ್ತುವ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಸಮಗ್ರ ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದು, ವಿಶ್ವವಿದ್ಯಾಲಯ ಪ್ರತಿನಿಧಿಸಿದ 10 ಕ್ರೀಡಾಪಟುಗಳ ಪೈಕಿ 8 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು.  


ಆಳ್ವಾಸ್ ಕಾಲೇಜಿನ ಅರವಿಂದ್ ಚಿನ್ನದ ಪದಕ, ತೇಜಸ್ ಬೆಳ್ಳಿಯ ಪದಕ ಪಡೆದಿದ್ದಾರೆ. ಉಳಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, ಸಮಗ್ರ ರನ್ನರ್ ಅಪ್ ಪ್ರಶಸ್ತಿ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 


ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
To Top