ಮತದಾನ ಜಾಗೃತಿ : ಕಿರುಚಿತ್ರ ನಿರ್ಮಾಣ ಸ್ಪರ್ಧೆ ವಿಜೇತರ ವಿವರ

Upayuktha
0


ಉಡುಪಿ :
ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಅಂಗವಾಗಿ ಸಾರ್ವಜನಿಕರಿಗೆ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಿರುಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ಮೊದಲ ಐದು ಸ್ಥಾನ ಪಡೆದ ಸ್ಪರ್ಧೆಯ ವಿಜೇತರ ವಿವರ ಈ ಕೆಳಗಿನಂತಿದೆ. 


ಸಾಧನಾ ಕಟಪಾಡಿ ಅವರ ನನ್ನ ಮತ ನನ್ನ ಹೆಮ್ಮೆ ಕಿರುಚಿತ್ರವು ಪ್ರಥಮ ಸ್ಥಾನ ಪಡೆದಿದ್ದು, 10,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ, ಆದಿತ್ಯ ಅಂಬಲಪಾಡಿ ಅವರ ಓಟು=02 ಕಿರುಚಿತ್ರಕ್ಕೆ ದ್ವಿತೀಯ ಸ್ಥಾನ ಲಭಿಸಿದ್ದು, 7,500 ರೂ. ನಗದು ಹಾಗೂ ಪ್ರಶಸ್ತಿ ಪತ್ರ, ಕೆ.ಸತ್ಯೇಂದ್ರ ಪೈ ಅವರ ಮತದಾರ ಕಿರು ಚಿತ್ರವು ತೃತೀಯ ಸ್ಥಾನ ಪಡೆದಿದ್ದು, 5,000 ರೂ ನಗದು ಹಾಗೂ ಪ್ರಶಸ್ತಿ ಪತ್ರ, ಸುಚಿತ್ರಎಸ್‍ಅವರ ಮತ ಸಂಭ್ರಮ ಕಿರುಚಿತ್ರಕ್ಕೆ ನಾಲ್ಕನೇ ಸ್ಥಾನ ಲಭಿಸಿದ್ದು, 2,000 ರೂ.ನಗದು ಹಾಗೂ ಪ್ರಶಸ್ತಿ ಪತ್ರ ಮತ್ತು ಸತೀಶ್‍ ಕಲ್ಯಾಣಪುರ ಅವರ ನಮ್ಮ ಓಟು ನಮ್ಮ ಪವರ್‍ ಕಿರುಚಿತ್ರವು ಐದನೇ ಸ್ಥಾನ ಪಡೆದಿದ್ದು, 1,000 ರೂ.ನಗದು ಹಾಗೂ ಪ್ರಶಸ್ತಿ ಪತ್ರ ಪಡೆದಿರುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top